Home / ಜಿಲ್ಲೆ / ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್

ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್

Spread the love

ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143 (ಅಕ್ರಮ ಗುಂಪು), 147 (ದೊಂಬಿ) 341 (ಅಕ್ರಮವಾಗಿ ತಡೆಯುವುದು) ಅಡಿ ಪ್ರಕರಣ ದಾಖಲಾಗಿದೆ. ಶ್ರೀಕಂಠೇಗೌಡ ಎ1, ಪುತ್ರ ಕೃಷಿಕ್ ಗೌಡ ಎ2, ಬೆಂಬಲಿಗರಾದ ಚಂದ್ರಕಲಾ ಎ3, ಜಗದೀಶ್ ನಾಲ್ಕನೇ ಆರೋಪಿ ಆಗಿದ್ದಾರೆ.

ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 ಟೆಸ್ಟ್ ಇತ್ತು. ಆದರೆ ಅಂಬೇಡ್ಕರ್ ಭವನದ ಬಳಿಯೇ ವಿಧಾನಸಭಾ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಅವರ ಮನೆಯಿದೆ. ಹೀಗಾಗಿ ಇಲ್ಲಿ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ಖ್ಯಾತೆ ತೆಗೆದಿದ್ದರು. ಅಲ್ಲದೆ ಕೋವಿಡ್ ಟೆಸ್ಟ್ ನಿಲ್ಲಿಸುವಂತೆ ಜಗಳ ಮಾಡಿದ್ದರು.

ಇದೇ ವೇಳೆ ಕೆಟಿಎಸ್ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ, ಕೆಟಿಎಸ್ ನಡೆದುಕೊಂಡ ರೀತಿ ಕಾನೂನು ಬಾಹಿರ ಹಾಗೂ ಅಕ್ಷಮ್ಯ ಅಪರಾಧವಾಗಿದೆ. ಈ ಸಂಬಂಧ ದೂರು ಪರಿಶೀಲಿಸಿ ಎಫ್‍ಐಆರ್ ದಾಖಲಿಸಲು ನಿರ್ಧಾರ ಮಾಡುವುದಾಗಿ ತಿಳಿಸಿದ್ದರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ