Breaking News

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ: ಅಪರಾಧಿ ಶಾರೀಖ್‌ಗೆ 10 ವರ್ಷ ಜೈಲು, ₹94 ಸಾವಿರ ದಂಡ..!!

Spread the love

ಮಂಗಳೂರು: 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ನಡೆದ ಕುಕ್ಕರ್ ಬ್ಲಾ*ಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದೆ. ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಖ್‌ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ₹94 ಸಾವಿರ ದಂಡ ವಿಧಿಸಿದೆ.

ಕೋರ್ಟ್ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಶಾರೀಖ್, ಕದ್ರಿ ಮಂಜುನಾಥ ದೇವಾಲಯಕ್ಕೆ ಬಾಂಬ್ ಇಡಲು ತೆರಳುತ್ತಿದ್ದಾಗ ಮಾರ್ಗಮಧ್ಯೆಯೇ ಸ್ಫೋಟ ಸಂಭವಿಸಿತ್ತು. ಪರಿಣಾಮ ದೊಡ್ಡ ಅನಾಹುತ ತಪ್ಪಿದ್ದು, ಸ್ಫೋಟದಲ್ಲಿ ಶಾರೀಖ್ ಸ್ವತಃ ಗಾಯಗೊಂಡಿದ್ದ. ಘಟನೆಯಲ್ಲಿ ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಕೂಡ ಗಾಯಗೊಂಡಿದ್ದರು.

ಘಟನೆ ಬಳಿಕ ಚಿಕಿತ್ಸೆ ಪಡೆದ ಶಾರೀಖ್ ಅನ್ನು ಎನ್ಐಎ ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಳಿಕ ಸಮಗ್ರ ತನಿಖೆಯೊಂದಿಗೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು.

ಇನ್ನೂ ಶಾರೀಖ್ ವಿರುದ್ಧ ಮತ್ತೊಂದು ಪ್ರಕರಣ ಬಾಕಿ ಇದ್ದು, ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾ*ಸ್ಟ್ ಪ್ರಕರಣ ವಿಚಾರಣೆ ಮುಂದುವರಿದಿದೆ.

ಇದರ ನಡುವೆ ಶಾರೀಖ್‌ನ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲು ಮನವಿ ಸಲ್ಲಿಸಲಾಗಿದ್ದರೂ, ಅದನ್ನು ನ್ಯಾಯಾಲಯ ತಿರಸ್ಕರಿಸಿದೆ. “ಬೆಂಗಳೂರಿನಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳಿವೆ, ಶಿವಮೊಗ್ಗಕ್ಕಿಂತ ಇಲ್ಲೇ ಸೂಕ್ತ,” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.


Spread the love

About Laxminews 24x7

Check Also

66 ರೌಡಿಗಳಿಗೆ ಮುಕ್ತಿ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಕಮಿಷನರ್

Spread the loveಬೆಂಗಳೂರು: ಪೊಲೀಸ್ ಇಲಾಖೆ ದಾಖಲೆ ನಿರ್ವಹಣೆಯ ಲೋಪದಿಂದ ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳನ್ನು ಕೈಬಿಟ್ಟಿರುವ ವಿಚಾರ ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ