Breaking News

ಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ – 16 ದಿನದಲ್ಲಿ 3.30 ಕೋಟಿ ರೂ. ಕಾಣಿಕೆ ನೀಡಿದ ಭಕ್ತರು

Spread the love

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ  ಶ್ರೀ ರಾಘವೇಂದ್ರ ಸ್ವಾಮಿ ಮಠದ  ಆಗಸ್ಟ್-ಸೆಪ್ಟೆಂಬರ್ ತಿಂಗಳಿನ 16 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಮಠದ ಇತಿಹಾಸದಲ್ಲೇ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ.

ಕೇವಲ 16 ದಿನದಲ್ಲಿ 3 ಕೋಟಿ 30 ಲಕ್ಷ 69,139 ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತೀ ತಿಂಗಳಿನಂತೆ ಈ ಬಾರಿಯೂ ಭಕ್ತರು ದಂಡು ಮಠಕ್ಕೆ ಹರಿದು ಬಂದಿದೆ. ಆದ್ರೆ ಗುರು ರಾಯರ 355ನೇ ಆರಾಧನಾ ಮಹೋತ್ಸವ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, 16 ದಿನಗಳಲ್ಲೇ ಕೋಟ್ಯಂತರ ರೂ. ಕಾಣಿಕೆ ಸಂಗ್ರಹವಾಗಿದೆ.

ಒಟ್ಟು ಕಾಣಿಕೆಯಲ್ಲಿ 3,20,66,639 ರೂ. ಕರೆನ್ಸಿ ನೋಟುಗಳು, 10,02,500 ರೂ. ನಾಣ್ಯಗಳು ಸಂಗ್ರಹವಾಗಿವೆ. 47 ಗ್ರಾಂ ಚಿನ್ನ, 632 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ. ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು, ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಹಾಜರಿದ್ದರು.


Spread the love

About Laxminews 24x7

Check Also

ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

Spread the loveಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ  ಕನ್ನಡ ಚಲನಚಿತ್ರ ರಂಗದ ನಟ ನಟಿಯರು  ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ