ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಕೊಡಗು, ಮಂಗಳೂರು, ಧಾರವಾಡ, ಕಲಬುರಗಿ ಹಾಗೂ ಚಿಕ್ಕಬಳ್ಳಾಪುರ, ಬೆಳಗಾವಿ ಜಿಲ್ಲೆಗಳು ಕೋವಿಡ್ 19 ಪ್ರಕರಣ ಕಂಡು ಬಂದ ಜಿಲ್ಲೆಗಳು ಸಂಪೂರ್ಣ ಬಂದ್ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.
ಈ ನಡುವೆ ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ನಿಷೇದಾಜ್ನೆ ಜಾರಿಗೊಳಿಸುವುದಾಗಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಮಾರ್ಚ್ 31ರ ವರೆಗೆ ಮೆಟ್ರೋ ನಿಲ್ದಾಣ ಕೂಡ ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಸಾರಿಗೆ ಸಂಚಾರ, ಬಸ್, ಕ್ಯಾಬ್, ರೈಲು ಸೇವೆ, ಪಬ್, ಬಾರ್, ರೆಸ್ಟೋರೆಂಟ್ ಸಂಪೂರ್ಣ ಸ್ಥಗಿತಗೊಳ್ಳಲಿದೆ.
9 ಜಿಲ್ಲೆಗಳ ಜನತೆ ಯಾವುದೇ ರೀತಿ ಆತಂಕ, ಗಾಬರಿಗಳಿಗೆ ಒಳಗಾಗುವ ಅಗತ್ಯವಿಲ್ಲ. ನಾಳೆಯಿಂದ ಹೂವು, ಹಣ್ಣು, ತರಕಾರಿ, ದಿನಸಿ, ಆಂಬುಲೆನ್ಸ್, ಇಂದನ ಸೇವೆ, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿದಂತೆ ಅಗತ್ಯವಸ್ತುಗಳು ಮಾತ್ರ ಸಿಗಲಿದೆ.