Breaking News

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಕೇಸ್ ದಾಖಲಿಸಿದ ಮಾರಿಹಾಳ ಠಾಣೆ ಪೊಲೀಸರು

Spread the love

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣದ ದಾಖಲಿಸಿ ಬೆಳಗಾವಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.‌

ಭರತ ರತ್ನಾಜಿ ಮುತಗೇಕರ (29) ಎಂಬುವರು ಮುತಗಾ ಗ್ರಾಮ ಬಳಿಯ ಭಾರತ ಪೆಟ್ರೋಲ್ ಪಂಪ್ ಸಮೀಪ ಇರುವ ಬೆಳಗಾವಿ-ಬಾಗಲಕೋಟ ರಸ್ತೆ ಪಕ್ಕದ ಖುಲ್ಲಾ ಜಾಗೆಯಲ್ಲಿ ಅಕ್ರಮವಾಗಿ ಸರಾಯಿ ಸೇವನೆ ಮಾಡುವ ವೇಳೆ ಮಾರಿಹಾಳ ಪೊಲೀಸರು ದಾಳಿ ಮಾಡಿ, ಆರೋಪಿತನಿಂದ ಒರಿಜಿನಲ್ ಚಾಯಿಸ್ ವಿಸ್ಕಿ ಹಾಗೂ ಗ್ಲಾಸ್‌ ಜಪ್ತ ಮಾಡಿಕೊಂಡಿದ್ದಾರೆ.

ಆರೋಪಿ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.25/2026 ಕಲಂ.15(A), 32(3) ಅಬಕಾರಿ ಕಾಯ್ದೆ-1965 ನೇದ್ದರ ಪ್ರಕಾರ ಪ್ರಕರಣ ದಾಖಲಾಗಿಸಿಕೊಂಡು, ಕಾನೂನು ಕ್ರಮ ಜರುಗಿಸಲಾಗಿದೆ.

ಆರೋಪಿತನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ದಾಳಿ ಕೈಗೊಂಡ ಎಎಸ್‌ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.


Spread the love

About Laxminews 24x7

Check Also

ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ

Spread the loveಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ