ಬೆಳಗಾವಿ – ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಬುಧವಾರ ಸಂಜೆ ಹೊಸ ಆದೇಶವೊಂದನ್ನು ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಇನ್ನು ಮುಂದೆ ಮಾಸ್ಕ್ ಧರಿಸದೆ ನೀವು ಮನೆಯಿಂದ ಹೊರಗೆ ಬರುವಂತಿಲ್ಲ.
ಕೊರೋನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೂತನ ಆದೇಶ ಹೊರಡಿಸಿದ್ದಾರೆ.
ಈ ಆದೇಶದ ಪ್ರಕಾರ ಮಾಸ್ಕ್ ಧರಿಸದೆ ಹೊರಗೆ ಬಂದರೆ 100 ರೂ. ದಂಡ ವಿಧಿಸಲಾಗುತ್ತದೆ. ಜೊತೆಗೆ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೂ 100 ರೂ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿರುವ ಆದೇಶವನ್ನು ಅವರು ಹೊರಡಿಸಿದ್ದಾರೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ. ಗುರುವಾರದಿಂದ ಮನೆಯಿಂದ ಹೊರಗೆ ಬರುವಾಗ ಹುಶಾರಾಗಿರಿ. ಮಾಸ್ಕ್ ಧರಿಸಿಯೇ ಹೊರಬೀಳಿ, ಹೊರಗೆ ಉಗುಳುವ ಚಟ ಇದ್ದರೆ ನಿಲ್ಲಿಸಿ.