Breaking News
Home / Uncategorized / ಬಿಡುವಿದ್ದಾಗ ಮಾಸ್ಕ್ ತಯಾರಿಸಿ ಗ್ರಾಮೀಣ ಜನರಿಗೆ ವಿತರಿಸ್ತಿದ್ದಾರೆ ಅಂಗನವಾಡಿ ಶಿಕ್ಷಕಿಯರು

ಬಿಡುವಿದ್ದಾಗ ಮಾಸ್ಕ್ ತಯಾರಿಸಿ ಗ್ರಾಮೀಣ ಜನರಿಗೆ ವಿತರಿಸ್ತಿದ್ದಾರೆ ಅಂಗನವಾಡಿ ಶಿಕ್ಷಕಿಯರು

Spread the love

ಮಡಿಕೇರಿ: ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದರ ಭಾಗವಾಗಿ ಆಶಾ ಕಾರ್ಯಕರ್ತೆಯರು ಸಹ ಟೆಸ್ಟಿಂಗ್ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇಲ್ಲೊಂದಿಷ್ಟು ಅಂಗನವಾಡಿ ಕಾರ್ಯಕರ್ತರು ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಬಾಡಗ ಗ್ರಾಮದ ಅಂಗನವಾಡಿ ಶಿಕ್ಷಕಿ ಜಯಂತಿ ಸೇರಿದಂತೆ ನಾಲ್ಕೈದು ಅಂಗನವಾಡಿಗಳ ಶಿಕ್ಷಕಿಯರು ಕೊರೊನಾ ನಿಯಂತ್ರಣಕ್ಕೆ ಸಹಾಯ ಮಾಡುತ್ತಿದ್ದು, ಮಾಸ್ಕ್ ಹೊಲೆದು ಗ್ರಾಮೀಣ ಭಾಗದ ಜನರಿಗೆ ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಮಾಸ್ಕ್ ಹೊಲೆಯುವ ಕಾರ್ಯ ಮಾಡುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಕೊರೊನಾ ಹರಡಬಾರದು ಎಂಬ ಉದ್ದೇಶದಿಂದ ಉಚಿತವಾಗಿ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ. ಈಗಾಗಲೇ 150ಕ್ಕೂ ಹೆಚ್ಚು ಮಾಸ್ಕ್ ಗಳನ್ನು ಹೊಲೆದು ಬಡ ಜನರಿಗೆ ನೀಡಿದ್ದಾರೆ.

ಈ ಶಿಕ್ಷಕಿಯರು ಕೂಡ ಸರ್ಕಾರ ವಹಿಸಿದ ಕೊರೊನಾ ಸಂಬಂಧಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನದವರೆಗೆ ಕೆಲಸ ಮಾಡಿ ಬಿಡುವಿನ ವೇಳೆಯಲ್ಲಿ ಮಾಸ್ಕ್ ಹೊಲಿಯುತ್ತಿದ್ದಾರೆ. ಕೊರೊನಾ ಕೆಲಸಕ್ಕೆ ತೆರಳಿದಾಗ ಯಾವ ಗ್ರಾಮಗಳಲ್ಲಿ ಬಡ ಜನರು ಮಾಸ್ಕ್ ಧರಿಸಿರುವುದಿಲ್ಲವೋ ಅವರನ್ನು ಗಮನಿಸಿ ಅಂತಹವರಿಗೆ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಹಣ ನೀಡಿ ಮಾಸ್ಕ್ ಕೊಂಡು ಧರಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಮಾಸ್ಕ್ ಧರಿಸದೆಯೇ ಓಡಾಡುತ್ತಿದ್ದಾರೆ. ಇಂತಹವರಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡುತ್ತಿದ್ದೇವೆ. ಜೊತೆಗೆ ಕೊರೊನಾ ಕುರಿತು ಜನರಿಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಶಿಕ್ಷಿಯೊಬ್ಬರು ತಿಳಿಸಿದ್ದಾರೆ. ಸಾಕಷ್ಟು ಸಂಘ ಸಂಸ್ಥೆಗಳು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿವೆ. ಈ ಶಿಕ್ಷಕಿಯರು ಸಹ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

Spread the loveಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ