Breaking News

ಏಪ್ರಿಲ್‌ 20 ರಂದು ಬೆಳಗಾವಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

Spread the love

ಬೆಳಗಾವಿ: ಬೆಳಗಾವಿ ತಾಲೂಕಿನ ಚಂದನ ಹೊಸೂರ ಗ್ರಾಮದಲ್ಲಿ ಏಪ್ರಿಲ್ 20 ಮತ್ತು 21 ರಂದು ಎರಡು ದಿನಗಳ ಕಾಲ ಪಾವನಕ್ಷೇತ್ರ ಬಡೇಕೊಳ್ಳಮಠದ ಶ್ರೀ ನಾಗಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವ ಜಯಂತಿ ನಿಮಿತ್ತ ಕೊಳ್ಳಬಸವ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ.

ಸೋಮವಾರ ದಿ. 20 ರಂದು ಮುಂಜಾನೆ 8 ಗಂಟೆಗೆ ವೇದಮೂರ್ತಿ ಶ್ರೀ ಮಹೇಶ ಸ್ವಾಮಿಗಳು ಇವರಿಂದ ಕೊಳ್ಳಬಸವ ನಾಗಲಿಂಗೇಶ್ವರನಿಗೆ ಅಭೀಷೇಕ ಜರುಗುವುದು. ಬಸವ ಜಯಂತಿ ಮೆರವಣಿಗೆ ಹಾಗೂ ಸಾಯಂಕಾಲ ಭಜನಾ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಮಂಗಳವಾರ ದಿ. 21 ಪ.ಪೂ ಶ್ರೀ ನಾಗಯ್ಯ ಮಹಾಸ್ವಾಮಿಗಳ ಹಾಗೂ ಶ್ರೀ ಸಿದ್ದಲಿಂಗ ದೇವರು ಹಿರೇಮಠ ಇವರ ಸಾನಿಧ್ಯದಲ್ಲಿ ಮಧ್ಯಾಹ್ನ 12 ಗಂಟೆಗೆ ಸಾಮೂಹಿಕ ವಿವಾಹಗಳು ಜರುಗವವು.

ಸಾಮೂಹಿಕ ವಿವಾಹ ಮಾಡಿಕೊಳ್ಳುವವರು ಹೆಚ್ಚಿನ ಮಾಹಿತಿಗಾಗಿ ಮೊ.ನಂ. ೭೬೨೫೦೬೬೦೫೧, ೯೫೩೮೧೪೭೩೨೬, ೮೮೮೪೧೩೧೦೫೭, ೯೯೧೬೬೬೧೩೮೫ ಇವರನ್ನು ಸಂಪರ್ಕಿಸಲು ಶ್ರೀ ಕೊಳ್ಳಬಸವ ನಾಗಲಿಂಗೇಶ್ವರ ದೇವಸ್ಥಾನ ಅಭಿವೃದ್ದಿ ಹಾಗೂ ಸಮಾಜ ಸೇವಾ ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ