Breaking News

ಗೋಕಾಕದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ

Spread the love

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗೀಕ ದೌರ್ಜನ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆಗೆ  ಆಗ್ರಹಿಸಿ ಅಖಲಿ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು  ಗೋಕಾಕ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ ಮೂಲಕ ರಾಜ್ಯಪಾಲರು, ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗೋಕಾಕ ನಗರಕ್ಕೆ  ಶಿಕ್ಷಣಕ್ಕಾಗಿ  ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ.ಆದರೆ, ಶಿಕ್ಷಣ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗೀಕ ದೌರ್ಜನ್ಯ, ಅತ್ಯಾಚಾರ ಎಸಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ನಗರದಲ್ಲಿರುವ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯ ಸುರಕ್ಷತೆ ದೃಷ್ಟಿಯಿಂದ ಪೊಲೀಸರು, ತಹಸೀಲ್ದಾರು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕ್ರಮ ವಹಿಸಬೇಕು. ರಕ್ಷಣೆ ಇಲ್ಲದ ಶಿಕ್ಷಣ ಸಂಸ್ಥೆಗಳಿಗೆ ಕಾನೂನು ಕ್ರಮ ಕೈಗೊಂಡು  ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಈ ವಿಷಯದಲ್ಲಿ ನಿರ್ಲಕ್ಷಿಸಿದ ಉ್ರಗ ಹೋರಾಟ ನಡೆಸಲಾಗುವುದು ಎಂದು ಮನವಿ ಮೂಲಕ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
 ವಿಭಾಗ ಸಂಘಟನಾ ಕಾರ್ಯದರ್ಶಿ ಸಚಿನ ಹಿರೇಮಠ, ಬಾಲಾಜಿ ಜವಳಕರ, ಅಖಲಿ ಹುಲ್ಲೊಳ್ಳಿ, ಸೌರಭ ಮೂಲಿಮನಿ, ಯುವರಾಜ, ಪ್ರಜ್ವಲ್ ಇತರರಿದ್ದರು.

Spread the love

About Laxminews 24x7

Check Also

ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ: ಎಂ.ಬಿ ಪಾಟೀಲ್

Spread the loveಬೆಂಗಳೂರು: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ