Breaking News

ಟೋಲ್ ವಿರೋಧಿಸಿ ಜೂ.23 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Spread the love

ಮಂಡ್ಯ: ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಮತ್ತು ರೈತರ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ, ಜೂನ್ 23 ರಂದು ರಾಜ್ಯಾದ್ಯಂತ ಟೋಲ್‌ ಬೂತ್‌ಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ  ಕರೆ ನೀಡಿದೆ‌.

ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ ಎಂದು ಅಧ್ಯಕ್ಷ ಕುರುಬೂರು ಶಾಂತಕುಮಾರ್  ತಿಳಿಸಿದ್ದಾರೆ.

ಕಬ್ಬು, ತರಕಾರಿ ಮತ್ತು ಹಣ್ಣುಗಳನ್ನು ಸಾಗಿಸುವ ಕೃಷಿ ವಾಹನಗಳ ಮೇಲೆ ಟೋಲ್ ವಿಧಿಸುವುದರಿಂದ ರೈತರ ಮೇಲೆ ತೀವ್ರ ಆರ್ಥಿಕ ಹೊರೆ ಬೀಳುತ್ತಿದೆ. ಕೂಡಲೇ ಇಂತಹ ವಾಹನಗಳಿಗೆ ಟೋಲ್ ಸುಂಕದಿಂದ ವಿನಾಯಿತಿ ನೀಡಬೇಕು. ವಾಹನ ಖರೀದಿ ಸಂದರ್ಭದಲ್ಲೇ ಮಾಲೀಕರು ರಸ್ತೆ ತೆರಿಗೆ ಪಾವತಿಸುತ್ತಾರೆ. ಹೀಗಿರುವಾಗ ಮತ್ತೆ ಟೋಲ್ ವಸೂಲಿ ಮಾಡುವುದು ಸರಿಯಲ್ಲ ಎಂದು ಆಗ್ರಹಿಸಿ, ರಾಜ್ಯದ ಎಲ್ಲಾ ಟೋಲ್‌ಗಳನ್ನ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ

ಇನ್ನೂ ಪಂಜಾಬ್‌ನಲ್ಲಿ ಅನುಸರಿಸುತ್ತಿರುವ ಸುಂಕ ವಸೂಲಿ ಮಾದರಿಯನ್ನ ಕರ್ನಾಟಕದಲ್ಲೂ ಜಾರಿಗೆ ತರಬೇಕು‌, ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಕಬ್ಬಿನ ಬಾಕಿ ಹಣ ತಕ್ಷಣ ಪಾವತಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ