Breaking News

ಸಚಿವ ಸತೀಶ ಜಾರಕಿಹೊಳಿ ವಿರುದ್ಧದ ಇಡಿ ದಾಳಿ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Spread the love

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಚಿವ ಸತೀಶ ಜಾರಕಿಹೊಳಿ ಅವರನ್ನು ತನಿಖೆಯ ಹೆಸರಿನಲ್ಲಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರನ್ನು ಇಡಿ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಸಿದರೂ ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ಹೆದರುವುದಿಲ್ಲ. ಇಂತಹ ಕ್ರಮಗಳಿಂದ ಜನಪರ ಹೋರಾಟವನ್ನು ಕುಗ್ಗಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಸತೀಶ ಜಾರಕಿಹೊಳಿ ಅವರು ಬಡವರು, ದಲಿತರು ಹಾಗೂ ಶೋಷಿತ ವರ್ಗದವರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾಯಕರು. ಅಂತಹ ನಾಯಕನ ವಿರುದ್ಧ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ. ಇದು ರಾಜಕೀಯ ಷಡ್ಯಂತ್ರದ ಭಾಗವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.

“ಜಾರಕಿಹೊಳಿ ಎಂಬ ಹೆಸರು ಒಂದು ಬ್ರ್ಯಾಂಡ್ ಆಗಿದೆ. ಅವರ ರಾಜಕೀಯ ವರ್ಚಸ್ಸಿಗೆ ಕಪ್ಪುಚುಕ್ಕೆ ತರುವ ಉದ್ದೇಶದಿಂದ ಇಂತಹ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇಂತಹ ಸಮಸ್ಯೆಗಳು ನೂರು ಬಂದರೂ ನಾವು ತಲೆ ಬಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರ ಶಕ್ತಿ ಮತ್ತು ಪ್ರಭಾವ ಏನು ಎಂಬುದು ಎಲ್ಲರಿಗೂ ತಿಳಿಯಲಿದೆ. ಕೇಂದ್ರ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ದ್ವೇಷದಿಂದ ನಡೆಯುತ್ತಿರುವ ಇಂತಹ ಕ್ರಮಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಎದುರಿಸಲಿದ್ದಾರೆ. ಯಾವುದೇ ತನಿಖೆ ಕಾನೂನುಬದ್ಧವಾಗಿ ನಡೆಯುವುದಕ್ಕೆ ವಿರೋಧವಿಲ್ಲ. ಆದರೆ ತನಿಖಾ ಸಂಸ್ಥೆಗಳನ್ನು ರಾಜಕೀಯ ಎದುರಾಳಿಗಳನ್ನು ಗುರಿಯಾಗಿಸಲು ಬಳಸಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮುಖಂಡರು ಹೇಳಿದರು.

ದಲಿತರ ಏಳಿಗೆ ಸಹಿಸಲಾಗದೆ ದಾಳಿ ಬಸವರಾಜ ಶಿಗ್ಗಾಂವಿ ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಬಸವರಾಜ ಶೆಗ್ಗಾವಿ ಮಾತನಾಡಿ, “ಸಚಿವ ಸತೀಶ ಜಾರಕಿಹೊಳಿ ಅವರು ದಲಿತರು, ಹಿಂದುಳಿದವರು ಹಾಗೂ ಬಡವರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಜನಪರ ಕೆಲಸಗಳನ್ನು ಸಹಿಸಲಾಗದೆ ಇಡಿ ದಾಳಿ ನಡೆಸಲಾಗಿದೆ ಎಂಬ ಅನುಮಾನ ಮೂಡಿದೆ. ಎಷ್ಟು ಬಾರಿ ದಾಳಿ ನಡೆಸಿದರೂ ನಾವು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇವೆ. ಬಿಜೆಪಿ ನಾಯಕರು ಕುತಂತ್ರದ ರಾಜಕಾರಣವನ್ನು ಕೈಬಿಡಬೇಕು” ಎಂದು ಆಗ್ರಹಿಸಿದರು.

ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧದ ಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಕಾನೂನು ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ಎದುರಿಸಲಿದ್ದಾರೆ. ಜನರ ಧ್ವನಿಯನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಕ್ರಮಗಳಿಂದ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದರು.

ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಇಡಿ ಕ್ರಮದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿದ ಕಾರ್ಯಕರ್ತರು, ಯಾವುದೇ ರಾಜಕೀಯ ಒತ್ತಡಕ್ಕೂ ಮಣಿಯದೆ ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

ಪ್ರತಿಭಟನೆಯಲ್ಲಿ ಅರವಿಂದ ಕಾರ್ಚಿ, ಬಾಬುಲಾಲ್, ರೋಹಿಣಿ,  ವಿನಯ ನಾವಲಗಟ್ಟಿ, ಸಲೀಂ, ಆಶಿಯಾ ಸನದಿ, ಪರೀದಾ ಬಾದ್, ಪರಶುರಾಮ ಮುಗ್ಗನವರ, ದಿಲ್‌ಸಾದ್, ಕಾಡಾ ಅಧ್ಯಕ್ಷ ಯುವರಾಜ ಕದಂ, ತವಳಾರ, ಮಹಾದೇವಿ ತಳವಾರ, ರಾಣಿ ಬಿ.ಪಿ. ಲತಾ ಮಾನೆ, ಸಲೀಂ ಕತ್ತಿಬ, ಜಯಶ್ರೀ ಮಾಳಗಿ, ದಿನೇಶ ನಾಶಿಪುಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ