Breaking News

ರಾಜ್ಯ ಸರ್ಕಾರದ ಬೊಕ್ಕಸದ ಲೆಕ್ಕ ಬಿಚ್ಚಿಟ್ಟ ಡಿಸಿಎಂ ಕಾರಜೋಳ…………

Spread the love

ಮಧುಗಿರಿ ,ಜೂ.6- ಲಾಕ್‍ಡೌನ್ ಹಿನ್ನಲೆಯಲ್ಲಿ ಸರಕಾರದ ಆದಾಯ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಎಂ. ಗೋವಿಂದ ಕಾರಜೋಳ ತಿಳಿಸಿದರು.

ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಜೆಪಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಪ್ರವಾಹದಿಂದ 35 ಸಾವಿರ ಕೋಟಿಗಳಷ್ಟು ನಷ್ಟವಾಗಿದ್ದು, ಇದೀಗ ಕೊರೊನಾ ಸಾಂಕ್ರಮಿಕ ರೋಗ ಹರಡದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿದೆ ಎಂದರು.

ರಸ್ತೆ, ಸೇತುವೆಗಳ ತುರ್ತು ದುರಸ್ಥಿಗಾಗಿ 750 ಕೋಟಿ ಬಿಡುಗಡೆ ಮಾಡಿದ್ದು, ಇದರ ಕಾಮಗಾರಿ ಪ್ರಗತಿಯಲ್ಲಿದೆ. 20-21ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು, ಲಾಕ್ ಡೌನ್ ನಿಂದಾಗಿ ಕಾಮಗಾರಿಗಳಯನ್ನು ಪ್ರಾರಂಭಿಸಿಲ್ಲ, ವಲಸೆ ಕಾರ್ಮಿಕರು ಅವರ ತವರು ರಾಜ್ಯಗಳಿಗೆ ತೆರಳಿರುವ ಪರಿಣಾಮ ಕೆಲಸಗಳು ತಾತ್ಕಾಲಿವಾಗಿ ಸ್ಥಗಿತಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು.

ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಕಾಂಗ್ರೇಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಂಜೂರಾಗಿದ್ದ 22 ಕೋಟಿ ರೂ ವೆಚ್ಚದ ಕಾಮಗಾರಿಯನ್ನು ಬಿ.ಜೆ.ಪಿ ಸರ್ಕಾರ ತಡೆಯೊಡ್ಡಿದೆ. ತಕ್ಷಣ ಈ ವಿಶೇಷ ಅನುಧಾನವನ್ನು ಬಿಡುಗಡೆ ಮಾಡಬೇಕೆಂದು ಉಪಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖಾ ವಾರ್ಡನ್ ಸಿಬ್ಬಂದಿಗಳು ಇಲಾಖೆಯಲ್ಲಿ 1985ರ ಸಿ ಅಂಡ್ ಆರ್ ನಿಯಮಗಳ ಬದಲಾವಣೆ ಕೋರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಬೇರ್ಪಟ್ಟಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸಿ ಅಂಡ್ ಆರ್ ನಿಯಮಗಳ ರೀತಿಯಲ್ಲಿ ವಾರ್ಡನ್‍ಗಳಿಗೆ ಮುಂಬಡ್ತಿ ನೀಡಬೇಕೆಂದು ಜಿಲ್ಲಾ ವಾರ್ಡನ್‍ಗಳ ಸಂಘದ ವತಿಯಿಂದ ಚಂದ್ರಶೇಖರ್ ರೆಡ್ಡಿ ಹಾಗೂ ನೌಕರರ ಸಂಘದ ಖಜಚಿ ಚಿಕ್ಕರಂಗಪ್ಪ ಸಚಿವರಿಗೆ ಮನವಿಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಸಂಸದ ಎ.ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಡಾ.ಕೆ.ವಂಶಿಕೃಷ್ಣ, ಲೋಕೊಪಯೋಗಿ ಇಲಾಖೆಯ ಇಇ ವಿರೂಪಾಕ್ಷಯ್ಯ ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿ ದೇವಿ, ಡಿವೈಎಸ್‍ಪಿ ಪ್ರವೀಣ್, ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ಇಒ ದೊಡ್ಡಸಿದ್ದಪ್ಪ, ಮುಖ್ಯಾಧಿಕಾರಿ ಅಮರನಾರಾಯಣ, ಜಿ.ಪಂ ಸದಸ್ಯ ಹೆಚ್.ಕೆಂಚಮಾರಯ್ಯ, ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಪಿ.ಎಲ್.ನರಸಿಂಹ ಮೂರ್ತಿ ಮುಖಂಡರಾದ ಡಾ.ಲಕ್ಷ್ಮಿಕಾಂತ, ಪುರಸಭೆ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ಕೆ.ನಾರಾಯಣ, ನರಸಿಂಹಮೂರ್ತಿ ಇದ್ದರು


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ