Breaking News

ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ

Spread the love

ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ​ಯಡಿಯೂರಪ್ಪ ತಿಳಿಸಿದ್ದಾರೆ.

ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು.

ಈ ಸಂಬಂಧ ಟ್ವೀಟ್​ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದಿದ್ದಾರೆ.

ಈ ಬಗ್ಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಮಾತನಾಡಿದ್ದು, ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಪ್ರಕರಣವನ್ನು ಸರ್ಕಾರ ಖಂಡಿಸುತ್ತಿದೆ, ಈ ಬಗ್ಗೆ ಗೃಹಸಚಿವರ ಹಾಗೂ ಸಿಎಂ ಯಡಿಯೂರಪ್ಪನವರ ಗಮನಕ್ಕೆ ತರಲಾಗಿದೆ. ನಾಳೆ ನಾನು ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಚಿರಾಗ್ ನಗರದಲ್ಲಿ ಯುಜಿಡಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ

Spread the love • ಒಳಚರಂಡಿ ಯೋಜನೆಗೆ ಶಾಸಕ ಆಸೀಫ್ ಸೇಠ್ ಚಾಲನೆ. • ₹36 ಕೋಟಿ ಒಳಚರಂಡಿ ಅಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ