Breaking News

ಮೇಕೆದಾಟು ಯೋಜನೆ – ವನ್ಯಜೀವಿ ಅನುಮೋದನೆಗಾಗಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಪ್ರಸ್ತಾವ

Spread the love

ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ  ನಿರ್ಮಾಣಕ್ಕೆ ಅಗತ್ಯವಿರುವ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು  ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ.

ಯೋಜನೆಗೆ 5,200 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಅನುಮೋದನೆ ಕೋರಿ ಕಾವೇರಿ ನೀರಾವರಿ ನಿಗಮವು ಜನವರಿ 4 ರಂದು ಪ್ರಸ್ತಾವ ಸಲ್ಲಿಸಿತ್ತು.

‘ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು very water) ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆ ಪಡೆದಿರುವ ವಿಸ್ತೃತ ಯೋಜನಾ ವರದಿಯನ್ನು ರಾಜ್ಯ ಸಲ್ಲಿಸಿಲ್ಲ’ ಎಂದು ಸಚಿವಾಲವು ಜನವರಿ 15 ರಂದು ಆಕ್ಷೇಪ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರವು ಅಪೂರ್ಣ ದಾಖಲೆಗಳನ್ನು ಸಲ್ಲಿಸಿದೆ ಎಂದೂ ಹೇಳಿತ್ತು.

ಸಮೀಕ್ಷೆ ಕಾರ್ಯಕ್ಕೆ ಈ ದಾಖಲೆಗಳನ್ನ ನೀಡುವ ಅಗತ್ಯ ಇಲ್ಲ ಎಂದು ನೀರಾವರಿ ನಿಗಮವು ಇದೇ 17 ರಂದು ಉತ್ತರ ನೀಡಿದೆ. ಜತೆಗೆ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ವನ್ಯಜೀವಿ ಅನುಮೋದನೆ ಪಡೆಯಲು ಮತ್ತೊಂದು ಪ್ರಸ್ತಾವವನ್ನೂ ಸಲ್ಲಿಸಿದೆ.


Spread the love

About Laxminews 24x7

Check Also

ಅರಣ್ಯ ಪ್ರದೇಶದಲ್ಲಿ ಬಚ್ಚಿಟ್ಟಿದ್ದ 64 ಸಾವಿರ ಮೌಲ್ಯದ ಅಕ್ರಮ ಗೋವಾ ಮದ್ಯ ಜಪ್ತಿ

Spread the loveಕಾರವಾರ: ಕಾರವಾರ-ಗೋವಾ ಗಡಿ ಭಾಗದಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗೋವಾದಿಂದ ಕಾರವಾರಕ್ಕೆ ಸಾಗಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ