Breaking News

ನ್ಯಾಯಾಧೀಶರ 17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಸ್ಕೂಟರ್‌ಗೆ ಡಿಕ್ಕಿ – ವ್ಯಕ್ತಿ ಸಾವು

Spread the love

ತಿರುವನಂತಪುರಂ: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ  17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್‌ ಬೆನ್ಜ್‌ (Mercedes Benz) ಕಾರು ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 54 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಇಂದು ನಡೆದಿದೆ.

ಕೊಚ್ಚಿಯ  ಚೆರಾನೆಲ್ಲೂರು ಸಮೀಪ ನಸುಕಿನ ಜಾವ 2 ರಿಂದ 3 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನ ಮಂಜಳಿ ನಿವಾಸಿ ಜಯಬಾಲಕೃಷ್ಣನ್ (54) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಾರು ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಪೊಲೀಸ್‌ ವಶಕ್ಕೆ
ಘಟನೆ ಬಳಿಕ ಕಾರು ಚಲಾಯಿಸುತ್ತಿದ್ದ 17 ವರ್ಷದ ಅಪ್ರಾಪ್ತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜಾಗರೂಕ ಚಾಲನೆ ಹಾಗೂ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪಗಳ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದ ವೇಳೆ ಬಾಲಕ ಮದ್ಯದ ಅಮಲಿನಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಲಾಗಿದೆ. ಹೆಚ್ಚಿನ ತಪಾಸಣೆಗಾಗಿ ಆತನ ರಕ್ತದ ಮಾದರಿಗಳನ್ನ ಸಂಗ್ರಹಿಸಲಾಗಿದೆ.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ