Breaking News

ದೇವೇಂದ್ರ ಫಡ್ನವಿಸ್ ಬೆಳಗಾವಿ ಭೇಟಿ ವೇಳೆ MES ಕಿರಿಕ್ – ಗಡಿ ವಿವಾದ ಇತ್ಯರ್ಥಕ್ಕೆ ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಡ

Spread the love

ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಬೆಳಗಾವಿ ಭೇಟಿಯ ವೇಳೆ ಗಡಿ ವಿವಾದದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರ ಸಿಎಂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅವರನ್ನ ಭೇಟಿಯಾದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು, ಗಡಿ ವಿವಾದ ಇತ್ಯರ್ಥಕ್ಕೆ ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಬೆಳಗಾವಿ ಸೇರಿದಂತೆ ಗಡಿ ಭಾಗದ ಮರಾಠಿ ಭಾಷಿಕರ ಸಮಸ್ಯೆಗಳನ್ನ ಮುಂದಿಟ್ಟುಕೊಂಡು ಎಂಇಎಸ್ ಮುಖಂಡರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಗಮನ ಸೆಳೆದಿದ್ದಾರೆ. ಹಲವು ವರ್ಷಗಳಿಂದ ಬಗೆಹರಿಯದೇ ಉಳಿದಿರುವ ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರ ಸರ್ಕಾರ ತನ್ನ ಪ್ರಯತ್ನಗಳನ್ನ ಚುರುಕುಗೊಳಿಸಬೇಕು. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವ ಗಡಿ ವಿವಾದದ ಪ್ರಕರಣಕ್ಕೆ ವೇಗ ನೀಡಲು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಜುಲೈ 6ರಂದು ನಡೆದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಈವರೆಗೂ ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂಬ ವಿಚಾರವನ್ನ ಎಂಇಎಸ್ ಮುಖಂಡರು ಪ್ರಸ್ತಾಪಿಸಿದ್ದಾರೆ. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನ ಕೇವಲ ಸಭೆ ಮತ್ತು ದಾಖಲೆಗಳಿಗೆ ಸೀಮಿತಗೊಳಿಸದೇ, ಅವುಗಳನ್ನು ಅನುಷ್ಠಾನಗೊಳಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಗಡಿ ಭಾಗದ ವಾಸ್ತವ ಪರಿಸ್ಥಿತಿಯನ್ನು ಅರಿಯಲು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರು ಬೆಳಗಾವಿ ಸೇರಿದಂತೆ ಗಡಿ ಪ್ರದೇಶಗಳಿಗೆ ಭೇಟಿ ನೀಡಬೇಕು. ಇಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳು, ಬೇಡಿಕೆಗಳು ಹಾಗೂ ಗಡಿ ವಿವಾದಕ್ಕೆ ಸಂಬಂಧಿಸಿದ ವಿಚಾರಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಗಡಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಐವರು ಸದಸ್ಯರನ್ನ ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಬೇಕು ಎಂಬ ಬೇಡಿಕೆಯನ್ನೂ ಎಂಇಎಸ್ ಮುಖಂಡರು ಮುಂದಿಟ್ಟಿದ್ದಾರೆ. ಈ ಸಮಿತಿಯ ಮೂಲಕ ಗಡಿ ಭಾಗದ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಮಹಾರಾಷ್ಟ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ವ್ಯವಸ್ಥೆ ಮಾಡಬೇಕು ಎಂಬುದು ಅವರ ಆಗ್ರಹವಾಗಿದೆ.

ಇತ್ತೀಚೆಗೆ ಡಾ. ಶರಣಕುಮಾರ ಲಿಂಬಾಳೆ ಅವರು ಗಡಿ ವಿವಾದದ ಕುರಿತು ನೀಡಿರುವ ಹೇಳಿಕೆಯ ವಿಚಾರವೂ ಮನವಿಯಲ್ಲಿ ಪ್ರಸ್ತಾಪವಾಗಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ತನ್ನ ಅಧಿಕೃತ ನಿಲುವನ್ನು ಸ್ಪಷ್ಟಪಡಿಸಬೇಕು. ಗಡಿ ವಿವಾದದ ಕುರಿತು ಸರ್ಕಾರದ ನಿಲುವು ಏನು ಎಂಬುದನ್ನು ಸಾರ್ವಜನಿಕವಾಗಿ ತಿಳಿಸಬೇಕು ಎಂದು ಎಂಇಎಸ್ ಮುಖಂಡರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ 440 ಪದವಿ ಕಾಲೇಜುಗಳಿಗೆ ಶೀಘ್ರ ಖಾಯಂ ಪ್ರಾಂಶುಪಾಲರ ನೇಮಕ: ಸಚಿವ ರಾಯರೆಡ್ಡಿ

Spread the loveಗದಗ: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ 440 ಸರ್ಕಾರಿ ಪದವಿ ಕಾಲೇಜುಗಳಿಗೆ ಶೀಘ್ರದಲ್ಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ