Breaking News

ಮೀಟ‌ರ್ ಆಧಾರಿತ ಆಟೋ ಸಂಚಾರ ಕಡ್ಡಾಯ: ಡಿಸಿ ಮೊಹಮ್ಮದ್ ರೋಷನ್

Spread the love

ಬೆಳಗಾವಿ: ಬೆಳಗಾವಿ ನಗರದಲ್ಲಿ ಆಟೋ ರಿಕ್ಷಾಗಳು ಕಡ್ಡಾಯವಾಗಿ ಮೀಟ‌ರ್ ಆಧಾರದಲ್ಲಿ ಸಂಚರಿಸಬೇಕು. ನಗರ ವ್ಯಾಪ್ತಿಯಲ್ಲಿ ಪ್ರಾರಂಭಿಕವಾಗಿ 1.6 ಕಿಲೋ ಮೀಟ‌ರ್ಗೆಗೆ ₹37 ತದನಂತರ ಪ್ರತಿ ಕಿಲೋ ಮೀಟರ್‌ಗೆ 15 ರೂ. ದರವನ್ನು ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಆಟೋರಿಕ್ಷಾಗಳು ಮುಂದಿನ 15 ದಿನಗಳೊಳಗೆ ನಿಯಮಾನುಸಾರ ಮೀಟರ್ ಲೆಕ್ಕದಲ್ಲಿ ಸಂಚರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೈಕ್, ಬಿಳಿ ನೋಂದಣಿ ಫಲಕ ಹೊಂದಿರುವ ಮೋಟಾರ್ ಕಾರು ಹಾಗೂ ರ್ಯಾಪಿಡೊ ಮಾದರಿಯ ಖಾಸಗಿ ವಾಹನಗಳಿಗೆ ಪ್ರಯಾಣಿಕರ ವಾಣಿಜ್ಯ ಸೇವೆ ನಡೆಸಲು ಅವಕಾಶವಿಲ್ಲ. ಇಂತಹ ವಾಹನಗಳು ನಿಯಮ ಉಲ್ಲಂಘಿಸಿ ಸಂಚರಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಆಟೋರಿಕ್ಷಾ ಚಾಲಕರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಗರದಲ್ಲಿ ಯಾವುದೇ ರೀತಿಯ ವಾದ-ವಿವಾದ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಸಂಚಾರ ವ್ಯವಸ್ಥೆ ಸುಗಮವಾಗಲು ಟ್ರಾಫಿಕ್ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.

ಈ ಕುರಿತು ಕಳೆದ ಎಂಟು ತಿಂಗಳ ಹಿಂದೆಯೇ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಆದರೂ ಇನ್ನೂ ಕೆಲವು ವಾಹನಗಳು ನಿಯಮ ಪಾಲನೆ ಮಾಡದಿರುವುದು ಕಂಡು ಬಂದಿದ್ದು, ಸಂಬಂಧಿತ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ನಗರದಲ್ಲಿ ಹೊಸ ಆಟೋರಿಕ್ಷಾಗಳ ನೋಂದಣಿಗೆ ಅವಕಾಶ ನೀಡಬಾರದು. ಆಟೋ ಅಸೋಸಿಯೇಷನ್ ಹಾಗೂ ಆಟೋ ಡೀಲರ್‌ಗಳೊಂದಿಗೆ ಸಭೆ ನಡೆಸಿ, ನೋಂದಣಿ ಅವಧಿ ಮುಗಿದ ಯೋಗ್ಯವಲ್ಲದ ಆಟೋರಿಕ್ಷಾಗಳಿಗೆ ಮರು ನೋಂದಣಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕು.


Spread the love

About Laxminews 24x7

Check Also

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌

Spread the loveವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ