Breaking News

ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್‌.ವಿಶ್ವನಾಥ್

Spread the love

ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರೋದು ರಾಜ್ಯ ಸರ್ಕಾರ. ಸುಮ್ಮನೆ ಕೇಂದ್ರದ ಮೇಲೆ ಆರೋಪ ಮಾಡೋದು ಬಿಟ್ಟು ದರ ಕಡಿಮೆ ಮಾಡಬೇಕು ಅಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಬಿಜೆಪಿ  ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣ. ಈಗಾಗಲೇ ನಮ್ಮ ಸಂಸದರು ಇದರ ಬಗ್ಗೆ ಹೇಳಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಬೇಕು ಅಂತ ಆಗ್ರಹಿಸಿದರು.

ಮೆಟ್ರೋ ವಿಚಾರದಲ್ಲಿ ಬೆಲೆ ಏರಿಕೆ, ಇಳಿಕೆ ಸಂಪೂರ್ಣ ಸ್ವಾತಂತ್ರ್ಯ ರಾಜ್ಯ ಸರ್ಕಾರಕ್ಕೆ ಇದೆ. ಇದಕ್ಕೆ ಕಾರಣ ಕೇಂದ್ರ ಅಂತ ಆರೋಪ‌ ಮಾಡ್ತಿದ್ದಾರೆ. ಕೇಂದ್ರ ದರ ಹೆಚ್ಚಳ ಮಾಡೋ ದಾರಿದ್ರ್ಯ ಬಂದಿಲ್ಲ. ಲೋಕಸಭಾ ಸದಸ್ಯರು ವಿವರಣೆ ನೀಡಿದ್ದಾರೆ. ಕೂಡಲೇ ದರ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ