Breaking News

ಸಾಹುಕಾರ್ ಮಾಡ್ತಾರಾ ಮಹಾರಾಷ್ಟ್ರದಲ್ಲಿ ಸರ್ಕಾರ್……!

Spread the love

ಹೊಸದಿಲ್ಲಿ: ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ.

 

ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ನಾಯಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮಧ್ಯೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ.

ನವದೆಹಲಿಯ ಗೌಪ್ಯಸ್ಥಳದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ದೇವೇಂದ್ರ ಫಡ್ನವಿಸ್ ಮಧ್ಯೆ ಮಾತುಕತೆ ನಡೆದಿದ್ದು, ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಈ ಉಭಯ ನಾಯಕರು ಚರ್ಚಿಸಿದ್ದಾರೆ.

ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಭಾಜಪ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ ರಮೇಶ್ ಜಾರಕಿಹೊಳಿ, ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಪ್ರಭಾವಿ ನಾಯಕರ ಮಧ್ಯದ ಭೇಟಿ ಶಿವಸೇನಾ ಮತ್ತು ಕಾಂಗ್ರೆಸ್ ವಲಯದಲ್ಲಿ ಭೀತಿ ಸೃಷ್ಟಿಸಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ