Breaking News

ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ

Spread the love

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ.

ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ ಗುಂಡೇಟು ತಗುಲಿ ಗಾಯಗಳಾಗಿದೆ.

ಸದ್ಯ, ಪರಾರಿಯಾಗ್ತಿದ್ದ ನಾಲ್ವರ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ದುಷ್ಕರ್ಮಿಗಳು ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದಾರೆ.

 

                 ಹಳೆ ದ್ವೇಷದ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ