Breaking News

ಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣ

Spread the love

ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿ  ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ.

ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಬಳಿಕ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಮೂವರು ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ!

Spread the loveಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ