Breaking News
Home / ಜಿಲ್ಲೆ / ಏ.30ರ ವರೆಗೆ ಉಚಿತ ಹಾಲು ವಿತರಣೆ …….

ಏ.30ರ ವರೆಗೆ ಉಚಿತ ಹಾಲು ವಿತರಣೆ …….

Spread the love

ಬೆಂಗಳೂರು : ಕೆ.ಎಂ.ಎಫ್ ನಿಂದ ರಾಜ್ಯದಲ್ಲಿ ವಾಸಿಸುತ್ತಿರುವ ಕೊಳಚೆ ಪ್ರದೇಶದ ಜನರಿಗೆ, ಅಲೆಮಾರಿಗಳಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ನಿತ್ಯ ಉಚಿತವಾಗಿ ಹಾಲು ವಿತರಣೆಯಾಗುತ್ತಿದ್ದು ಸದ್ಯ ಈ ತಿಂಗಳ ಅಂತ್ಯದವರೆಗೂ ಇದನ್ನು ವಿಸ್ತರಣೆ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರಿಕೊಂಡಿದ್ದೆ ಅದರಂತೆಯೇ ಎಪ್ರೀಲ್ 30ರ ವರೆಗೆ ಉಚಿತ ಹಾಲು ನೀಡಲು ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಒಪ್ಪಿಗೆ ಸೂಚಿಸಿದ್ದು ಸಂತಸ ತಂದಿದೆ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಹಾಲು ಸರಿಯಾಗಿ ವಿತರಣೆ ಆಗದಿರುವ ಬಗ್ಗೆ ಸಾಕಷ್ಟು ದೂರು ಬಂದ ಹಿನ್ನೇಲೆಯಲ್ಲಿ ಪಶುಪಾಲನಾ, ಪಶುವೈದ್ಯ ಸೇವಾ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಮಿತಿಯನ್ನು ರಚಿಸಿ ಮಹಾನಗರ ಪಾಲಿಕೆ ಹಾಗೂ ಇತರೆ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಲಿನ ವಿತರಣೆ ಮಾಡಲು ಆದೇಶಿಸಲಾಗಿದೆ.

ಬಡಜನರಿಗೆ ತಲುಪಬೇಕಾದ ಉಚಿತ ಹಾಲಿನ ವಿತರಣೆಯಲ್ಲಿ ಯಾವುದೇ ನಿರ್ಲಕ್ಷ ಕಂಡುಬಂಡಲ್ಲಿ ಮೂಲಾಜಿಲ್ಲಾದೆ ಅಂತವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯದ ಬಡ ಜನರಿಗೆ ಉಚಿತವಾಗಿ ಹಾಲು ನೀಡುವುದನ್ನು ದಿನಾಂಕ 22.04.2020 ರಿಂದ 30.04.2020ರವರೆಗೆ ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಬಡಜನರಿಗೆ ನಿತ್ಯ 7.75 ಲಕ್ಷ ಲೀ ಉಚಿತ ಹಾಲು ನೀಡಲಾಗುತ್ತಿದೆ. 1/2 .ಲೀ ಪ್ಯಾಕ್ ನಲ್ಲಿ ಹಾಲು ನೀಡಲಾಗುತ್ತಿದ್ದು ಈ ತಿಂಗಳ ಅಂತ್ಯದವರೆಗೆ ಒಟ್ಟು 25.81 ಕೋಟಿ ವೆಚ್ಚವಾಗಲಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ