Breaking News

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the love

ಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸ್ಥಳಕ್ಕೆ ತೆರಳಿ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.


ಹಿರಿಯ ನಾಗರಿಕರಿಗಾಗಿ ವಿವಿಧ ಮೋಜಿನ ಆಟಗಳು, ಸಂವಾದ, ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಸುಮಾರು 15 ಸಾವಿರ ಹಿರಿಯ ನಾಗರಿಕರು ಸೇರಿದಂತೆ 20 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.


ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯಕ್ರಮದ ಪೆಂಡಾಲ್, ಊಟದ ವ್ಯವಸ್ಥೆ, ಆಟಕ್ಕಾಗಿ ಮಾಡಲಾಗಿರುವ ತಯಾರಿ ಸೇರಿದಂತೆ ಎಲ್ಲವನ್ನೂ ಪರಿಶೀಲಿಸಿ, ಮಾರ್ಗದರ್ಶನ ನೀಡಿದರು. ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಲು ಬೇಕಾದ ಸಿದ್ಧತೆ ಮಾಡುಕೊಳ್ಳುವಂತೆ ಸೂಚಿಸಿದರು.


ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸಹ ಈ ಸಂದರ್ಭದಲ್ಲಿ ಇದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಸ್ಥಳಕ್ಕೆ ತೆರಳಿ ಸಿದ್ಧತೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.
ಹಿರಿಯ ನಾಗರಿಕರನ್ನು ತಮ್ಮ ಮಾರ್ಗದರ್ಶಕರು, ಸಮಾಜದ ಆಸ್ತಿ ಎಂದು ಪರಿಗಣಿಸಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು, ಅವರಲ್ಲಿ ಜೀವನೋತ್ಸಾಹ ತುಂಬುವ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದಾರೆ. ಮೋಜಿನ ಆಟದ ನಂತರ ಸಭಾ ಕಾರ್ಯಕ್ರಮ ಸಹ ನಡೆಯಲಿದ್ದು, ವಿವಿಧ ಮಠಾಧೀಶರು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ