Breaking News

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

Spread the love

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.

ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ನಾನು ಎಲ್ಲರ ಹಿತರಕ್ಷಣೆಗೆ ಬದ್ಧಳಾಗಿದ್ದೇನೆ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ನಿರ್ದೇಶಕರಾದ ಮಹೇಶ್‌ಬಾಬು ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ನಿಂತ ಸತೀಶ್‌ & ಅಭಯ್

Spread the loveಬೆಳಗಾವಿ: ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ನಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ