Breaking News

ಕಂಟೋನ್ಮೆಂಟ್ ಪಶು ಆಸ್ಪತ್ರೆಗೆ ಸಚಿವ ಪುಟ್ಟರಂಗ ಶೆಟ್ಟಿ ದಿಢೀರ್ ಭೇಟಿ: ಕರ್ತವ್ಯಕ್ಕೆ ಗೈರಾದ ಅಧಿಕಾರಿಗೆ ನೋಟಿಸ್ ಬಿಸಿ

Spread the love

ಬೆಂಗಳೂರು: ಕಂಟೋನ್ಮೆಂಟ್‌ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಪಶುಸಂಗೋಪನಾ ಸಚಿವ ಪುಟ್ಟರಂಗ ಶೆಟ್ಟಿ ಅವರು ಇಂದು ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸುಮ್ಮನೆ ಹೊರಗಿನಿಂದ ನೋಡಿ ಹೋಗದೆ, ಪ್ರತಿಯೊಂದು ವಿಭಾಗಕ್ಕೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯವಾಗಿ ಸ್ಕ್ಯಾನಿಂಗ್ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಔಷಧ ವಿತರಣಾ ವಿಭಾಗಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಸಿಗುತ್ತಿರುವ ಚಿಕಿತ್ಸೆ ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಇದೇ ವೇಳೆ ಆಸ್ಪತ್ರೆಗೆ ತಮ್ಮ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳನ್ನು ಕರೆದುಕೊಂಡು ಬರುವ ಸಾರ್ವಜನಿಕರು ಸಚಿವರ ಬಳಿ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಜನರ ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಚಿವ ಪುಟ್ಟರಂಗ ಶೆಟ್ಟಿ, ಆದಷ್ಟು ಬೇಗ ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಿಕೊಡುವುದಾಗಿ ಸ್ಥಳದಲ್ಲೇ ಭರವಸೆ ನೀಡಿದ್ದಾರೆ.

ಕರ್ತವ್ಯಕ್ಕೆ ಗೈರಾದ ಅಧಿಕಾರಿಗೆ ನೋಟಿಸ್
ಪರಿಶೀಲನೆಯ ಸಮಯದಲ್ಲಿ ಆಸ್ಪತ್ರೆಯ ಉಪನಿರ್ದೇಶಕ ಡಾ. ಚಂದ್ರಶೇಖರ್ ಟಿ. ಅವರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದೆ ಗೈರಾಗಿರುವುದು ಸಚಿವರ ಗಮನಕ್ಕೆ ಬಂದಿದೆ. ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ ಸಚಿವರು, ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ತಕ್ಷಣವೇ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬಳಿಕ ಮಾತನಾಡಿದ ಸಚಿವರು, ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗಬೇಕು ಮತ್ತು ಮೂಕ ಪ್ರಾಣಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಬೇಕು. ಇಲಾಖೆಯಲ್ಲಿ ಪ್ರತಿಯೊಬ್ಬರೂ ಶಿಸ್ತು ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಇದೇ ನಮ್ಮ ಮೊದಲ ಆದ್ಯತೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆ ಆಯುಕ್ತರಾದ ಲಿಂಗರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ರಾಜೀವ್ ಎನ್. ಕೂಲೇರ ಹಾಗೂ ಆಸ್ಪತ್ರೆಯ ಪಶುವೈದ್ಯರು ಹಾಜರಿದ್ದರು.


Spread the love

About Laxminews 24x7

Check Also

ಪ್ರದೀಪ್ ಈಶ್ವರ್ ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನ – ತಂದೆಯಾದ ಸಂಭ್ರಮದಲ್ಲಿ ಶಾಸಕ

Spread the loveಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ