Breaking News

ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ – ಯೋಜನೆಗಳ ಅನುಷ್ಠಾನಕ್ಕೆ ಸಮಯ ನಿಗದಿ

Spread the love

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ.ರಘುಮೂರ್ತಿ  ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ (ಆ.17) ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.


Spread the love

About Laxminews 24x7

Check Also

ತುಮಕೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

Spread the loveತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇನಹಳ್ಳಿ ಪೊಲೀಸರು  ಬಂಧಿಸಿರುವ ಘಟನೆ ಮಧುಗಿರಿ ತಾಲೂಕಿನ ಕಸಿನಾಯಕನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ