Breaking News

ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಲ್ಲಿ ಚೆಸ್ ಆಟದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಗೆ, ತಾರ್ಕಿಕ ಚಿಂತನೆ, ಏಕಾಗ್ರತೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಇಂತಹ ಚೆಸ್ ಪಾರ್ಕ್‌ಗಳು ಸಹಕಾರಿಯಾಗಲಿವೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಬೌದ್ಧಿಕ ಚಟುವಟಿಕೆಗಳಿಗೆ ಪೂರಕ ವಾತಾವರಣ ಕಲ್ಪಿಸಿರುವುದು ಶ್ಲಾಘನೀಯವಾಗಿದೆ.

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಸಚಿವರು ವಿದ್ಯಾರ್ಥಿಗಳೊಂದಿಗೆ ಚೆಸ್ ಆಡುವ ಮೂಲಕ ನೂತನ ಚೆಸ್ ಪಾರ್ಕ್‌ಗೆ ಶುಭ ಹಾರೈಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ