Breaking News

ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ರೇಪ್ – ಮತ್ತು ಬರುವ ಔಷಧಿ ನೀಡಿ ಸರ್ಕಾರಿ ನೌಕರನಿಂದ ದುಷ್ಕೃತ್ಯ

Spread the love

ಬಳ್ಳಾರಿ: ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಡಿ-ಗ್ರೂಪ್ ನೌಕರ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಆಸ್ಪತ್ರೆಯ ಡಿ-ಗ್ರೂಪ್ ನೌಕರ ಅಜಯ್ ಮದಕರಿ (37) ದುಷ್ಕೃತ್ಯ ಎಸಗಿದ್ದಾನೆ. ಈ ಸಂಬಂಧ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ತಾಯಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.

ಚಿಕಿತ್ಸೆಗೆಂದು ಅಪ್ರಾಪ್ತ ಬಾಲಕಿ ತಾಯಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಳು. ಈ ವೇಳೆ ಆರೋಪಿ ಬಾಲಕಿಯನ್ನು ಪುಸಲಾಯಿಸಿ ತನ್ನ ಕ್ವಾಟ್ರಸ್‌ಗೆ ಕರೆದೊಯ್ದಿದ್ದ. ಅಲ್ಲಿ ಮತ್ತು ಬರುವ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಇಷ್ಟ ಇಲ್ಲ ಎಂದಿದ್ದರೆ ಮದುವೆಯನ್ನೇ ನಿಲ್ಲಿಸುತ್ತಿದ್ದೆವು: ಪೊಲೀಸರೆದುರು ಸಿಯಾ ಸಹೋದರನ ಮಾತು

Spread the loveಮುಂಬೈ: ಕೇತನ್‌  ಜೊತೆ ಮದುವೆ ನನಗೆ ಇಷ್ಟ ಇಲ್ಲ ಎಂದು ಸಿಯಾ (Siya Goyal) ಹೇಳಿದ್ದರೆ ಆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ