Breaking News

ರಾಜ್ಯದಲ್ಲಿ ಮಿಕ್ಸ್ ಪೆಟ್ರೋಲ್ ಸಮರ – ಬಂಕ್‌ಗಳಲ್ಲಿ ಎಥೆನಾಲ್ ಡಿಸ್‌ಪ್ಲೇ ಕಡ್ಡಾಯ; ಶೀಘ್ರದಲ್ಲೇ ನ್ಯೂ ರೂಲ್ಸ್

Spread the love

ಬೆಂಗಳೂರು: ರಾಜ್ಯದಲ್ಲಿನ ಪೆಟ್ರೋಲ್ ಬಂಕ್‌ಗಳಲ್ಲಿ  ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನ ಡಿಜಿಟಲ್ ಡಿಸ್‌ಪ್ಲೇ ಮೂಲಕ ಕಡ್ಡಾಯವಾಗಿ ಪ್ರದರ್ಶಿಸುವ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.

ಪೆಟ್ರೋಲ್‌ನಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗಿದೆ ಎಂಬ ಮಾಹಿತಿಯನ್ನ ಗ್ರಾಹಕರಿಗೆ ಸ್ಪಷ್ಟವಾಗಿ ತಿಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರೊಂದಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ಡಿಜಿಟಲ್ ಡಿಸ್‌ಪ್ಲೇನಲ್ಲಿ ಮಾಹಿತಿ ನಮೂದಿಸುವಂತೆ ಸೂಚನೆ ನೀಡಲು ಚಿಂತನೆ ನಡೆಸಲಾಗಿದೆ.

ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯ ಸರ್ಕಾರ ಪತ್ರ ಬರೆಯಲು ನಿರ್ಧರಿಸಿದೆ. ಎಥೆನಾಲ್ ಮಿಶ್ರಣದ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸದಿದ್ದರೆ, ರಾಜ್ಯದಲ್ಲಿ ಮತ್ತೆ ಮತ್ತೆ ಪ್ರಯೋಗಾಲಯಗಳಲ್ಲಿ ಪೆಟ್ರೋಲ್ ಮಾದರಿಗಳನ್ನ ಪರೀಕ್ಷಿಸಲು ಸರ್ಕಾರ ಮುಂದಾಗಲಿದೆ. ಅಲ್ಲದೇ, ಪ್ರಯೋಗಾಲಯದ ಪರೀಕ್ಷಾ ವರದಿಗಳನ್ನು ಸಾರ್ವಜನಿಕರ ಮುಂದಿಡುವ ಪ್ರಯತ್ನವನ್ನೂ ಮತ್ತೆ ಮಾಡಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್  ತಿಳಿಸಿದ್ದಾರೆ.

ಇದರ ಜೊತೆಗೆ ಪೆಟ್ರೋಲ್ ಮಿಶ್ರಣದ ಪ್ರಮಾಣ ಸೇರಿದಂತೆ ಇತರ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ಆನ್‌ಲೈನ್ ಪೋರ್ಟಲ್ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ