ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಮಹಾವೀರ ನಗರದಲ್ಲಿ ನಡೆಸಿದ ‘ಜನತಾ ದರ್ಬಾರ್’ ಕುರಿತು ನೋಡೋಣ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ನೇರವಾಗಿ ಜನರ ಮನೆಬಾಗಿಲಿಗೆ ತೆರಳುತ್ತಿರುವ ಶಾಸಕರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಶಾಸಕ ಆಸೀಫ್ ಸೇಠ್ ಅವರು ಇಂದು ಮಹಾವೀರ ನಗರ ಪ್ರದೇಶದಲ್ಲಿ ಸಮಗ್ರ ರೌಂಡ್ಸ್ ನಡೆಸಿ, ‘ಜನತಾ ದರ್ಬಾರ್’ ಮೂಲಕ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಮನ್ ಸೇಠ್, ಸ್ಥಳೀಯ ಮುಖಂಡರು ಹಾಗೂ ನೂರಾರು ನಿವಾಸಿಗಳು ಶಾಸಕರ ಜೊತೆಗೂಡಿ ಪ್ರದೇಶದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಶಾಸಕರು ಸ್ವತಃ ಪ್ರತಿ ಗಲ್ಲಿಗಳಿಗೆ ಭೇಟಿ ನೀಡಿ, ಅಲ್ಲಿನ ರಸ್ತೆಗಳ ದುಸ್ಥಿತಿ ಹಾಗೂ ಸಾರ್ವಜನಿಕ ಆಸ್ತಿಗಳ ನಿರ್ವಹಣೆಯನ್ನು ವೀಕ್ಷಿಸಿದರು.
ವಿಶೇಷವಾಗಿ ಚರಂಡಿ ವ್ಯವಸ್ಥೆ, ನೈರ್ಮಲ್ಯ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ನಿವಾಸಿಗಳು ಶಾಸಕರ ಗಮನ ಸೆಳೆದರು. ಜನರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಶಾಸಕ ಆಸಿಫ್ ಸೇಠ್ ಅವರು, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದರು. “ಅಧಿಕಾರ ಎನ್ನುವುದು ಜನಸೇವೆಗಾಗಿ, ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವುದು ನಮ್ಮ ಆದ್ಯತೆ” ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
Laxmi News 24×7