Breaking News

ಕಾಲುವೆಗಳಿಗೆ ನೀರು ಹರಿಸುವಂತೆ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ

Spread the love

ಗೋಕಾಕ- ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡ್ಕಲ್ ಜಲಾಶಯದಿಂದ ಮೂರು ಕಾಲುವೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಮನವಿ ಮಾಡಿಕೊಂಡರು.
ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯ ಆಹಾಕಾರ ತಪ್ಪಿಸಲು ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ ಎಂದವರು ತಿಳಿಸಿದರು.
ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು.‌ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪ್ರಸಕ್ತ ಸನ್ನಿವೇಶದಲ್ಲಿ ಅಗತ್ಯವಾಗಿದೆ.‌
ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿಯವರು ಜನರ ಹಿತದೃಷ್ಟಿಯಿಂದ ನೀರು ಹರಿಸುವ ವಿಶ್ವಾಸ ನನಗಿದೆ. ಇನ್ನೆರಡು ದಿನಗಳಲ್ಲಿ ರೈತರಿಗೆ ಶುಭ ಸುದ್ದಿ ಸಿಗಲಿದೆ ಎಂದು ತಿಳಿಸಿದರು.
ಕಾಲುವೆಗಳಿಗೆ ನೀರು ತಲುಪಿಸಲು ಅಧಿಕಾರಿಗಳು ಮುಂದೆ ಬರಬೇಕು. ನದಿ ತೀರದ ಗ್ರಾಮಗಳಿಗೂ ಸಹ ನೀರು ಹರಿಯಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳ ಮಧ್ಯ ಸಮನ್ವಯ ಸಾಧಿಸಲು ನಮ್ಮ ಟೀಂ ಎನ್ಎಸ್ಎಫ್ ಸಿದ್ಧವಿದೆ.
ರೈತರಿಗೆ ನೀರು ಸಿಗಬೇಕೆನ್ನುವ ಮಹತ್ವಾಕಾಂಕ್ಷೆ ನಮ್ಮದು ಎಂದರು. ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ