Breaking News

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the love

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತನನ್ನು ದಾವಣಗೆರೆ  ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು.

ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ ಸಾಯುತ್ತೀನಿ ಎಂದು ಹೇಳಿ, ಫೆ.17ರಂದು ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ