Breaking News

ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ ಶಾಸಕ ಮಹಾಂತೇಶ ಕೌಜಲಗಿ

Spread the love

ಬೈಲಹೊಂಗಲ: ಕಾಂಗ್ರೆಸ್​ ಶಾಸಕಾಂಗ ಪದ ನೂತನ ನಾಯಕರಾಗಿ ಆಯ್ಕೆಯಾಗಿರುವ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಸೋಮವಾರ ಭೇಟಿಯಾಗಿ ಅಭಿನಂದಿಸಿದರು.
ಒಂದು ಬಾರಿ ಎಂಎಲ್ಸಿ ಆಗಿ ಮತ್ತು ನಾಲ್ಕನೆ ಬಾರಿಗೆ ಶಾಸಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಬೈಲಹೊಂಗಲ ೇತ್ರ ಅಭಿವೃದ್ಧಿ ಹಾಗೂ ರಾಜ್ಯದ ಜನರ ಏಳಿಗೆಗೆ ಸೇವೆ ಸಲ್ಲಿಸುವುದು ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಅನುಭವ, ಹಿರಿತನದ ಆಧಾರದ ಮೇಲೆ ಸಂಪುಟ ದರ್ಜೆಯ ಸಚಿವ ಸ್ಥಾನ
ನೀಡಬೇಕೆಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಶಾಸಕ ಮಹಾಂತೇಶ ಕೌಜಲಗಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ, ನೀವು ಹಿರಿಯರಾಗಿ ಅನುಭವಿ ರಾಜಕಾರಣಿಯಾಗಿದ್ದೀರಿ.
ನಿಮ್ಮ  ೇತ್ರ ಪ್ರಗತಿಪಥದತ್ತ ಕೊಂಡಯ್ಯುತ್ತಿದ್ದೀರಿ. ನಿಮ್ಮ ಬೇಡಿಕೆ ಸಮರ್ಪಕವಾಗಿದೆ. ಪಕ್ಷದ ಹಿರಿಯರೊಂದಿಗೆ ಚರ್ಚಿಸಿ ಸೂಕ್ತ ರ್ನಿಣಯ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ, ಎಸ್​.ಆರ್​.ಪಾಟೀಲ, ಶಾಸಕ ಗಣೇಶ ಹುಕ್ಕೇರಿ, ಯುವ ಮುಖಂಡ ಬಸವರಾಜ ಕೌಜಲಗಿ, ಮಹೇಶ ಬೆಲ್ಲದ, ಜಿಲ್ಲಾ ಯುವ ಕಾಂಗ್ರೆಸ್​ ಅಧ್ಯ ಕಾರ್ತಿಕ ಪಾಟೀಲ ಇತರರಿದ್ದರು.

Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ