Breaking News

ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ : ಆರು ನಾಗರಿಕರಿಗೆ ಗಾಯ

Spread the love

ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.

ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ.

ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

 

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ