Home / ಜಿಲ್ಲೆ / ದಕ್ಷಿಣ ಕನ್ನಡ / ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭ

ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭ

Spread the love

ಮಂಗಳೂರು: ಕೊರೊನಾದಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಮತ್ತೆ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ.

ಮೇ 25ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 ಗಂಟೆಗೆ ಮತ್ತು ಇಂಡಿಗೋ ವಿಮಾನ ಸಂಜೆ 5.55ಕ್ಕೆ ಟೇಕಾಫ್ ಆಗಲಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 10.20ಕ್ಕೆ, ರಾತ್ರಿ 9.35 ಹಾಗೂ ಇಂಡಿಗೋ ಸಂಜೆ 7.30ಕ್ಕೆ ಸಂಚರಿಸಲಿದೆ.

ಮುಂಬೈನಿಂದ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 7.05ಕ್ಕೆ, ಇಂಡಿಗೋ ಬೆಳಗ್ಗೆ 9.30ಕ್ಕೆ ಮಂಗಳೂರಿಗೆ ಹೊರಡಲಿವೆ. ಮಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 9.05ಕ್ಕೆ, ಇಂಡಿಗೋ 11.40 ಕ್ಕೆ ತೆರಳಲಿದೆ.

ಚೆನ್ನೈನಿಂದ ಮಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಮಂಗಳೂರಿನಿಂದ ಚೆನ್ನೈಗೆ ರಾತ್ರಿ 8.05ಕ್ಕೆ ಇಂಡಿಗೋ ವಿಮಾನ ಸಂಚರಿಸಲಿದೆ ಎಂದು ಇಂಡಿಗೋ ಮತ್ತು ಸ್ಪೈಸ್ ಜೆಟ್ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

Spread the loveಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ