Breaking News

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Spread the love

ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ.

ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು ಇನ್ನಷ್ಟು ಬಲಗೊಳ್ಳಲಿ ಎಂಬ ಸಂದೇಶವನ್ನು ನೀಡಿದ್ದಾರೆ.

ಇನ್ನು 77ನೇ ಗಣರಾಜ್ಯೋತ್ಸವವನ್ನು ವಂದೇ ಮಾತರಂ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದ್ದು, ಪ್ರಜಾಪ್ರಭುತ್ವದ ಸಂಭ್ರಮ, ಸೇನಾ ಶಕ್ತಿ ಹಾಗೂ ವೈವಿಧ್ಯತೆಯ ಅನಾವರಣಕ್ಕೆ ದೇಶ ಸಾಕ್ಷಿಯಾಗಲಿದೆ. ಈ ವರ್ಷ ವಿದೇಶಿ ಅತಿಥಿಗಳಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ಲೇನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟ ಭಾಗಿಯಾಗಲಿದ್ದಾರೆ. ಇವರನ್ನು ಪದ್ಧತಿಯಂತೆ 21 ಗನ್ ಸೆಲ್ಯೂಟ್, ಗಾರ್ಡ್ ಆಫ್ ಹಾನರ್ ಮೂಲಕ ಗೌರವಿಸಲಾಗುತ್ತದೆ.

ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ವಂದೇ ಮಾತರಂ ಥೀಂನಲ್ಲೇ ಎಲ್ಲ ಕಾರ್ಯಕ್ರಮಗಳು ನಡೆಯಲಿದೆ. ಆಪರೇಷನ್ ಸಿಂಧೂರ ಮಿಷನ್ ಪರೇಡ್‌ನಲ್ಲಿ ಗಮನ ಸಳೆಯಲಿದೆ. ಬೆಳಗ್ಗೆ 10:30ಕ್ಕೆ ಪರೇಡ್ ಆರಂಭಗೊಳ್ಳಲಿದ್ದು, ಸುಮಾರು 90 ನಿಮಿಷಗಳ ಕಾಲ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾರತೀಯ ಸೇನೆಯು ಬ್ಯಾಟಲ್ ಅರೇ (ಯುದ್ಧ ಶ್ರೇಣಿ) ಪ್ರದರ್ಶಿಸಲಿದೆ. ಈ ವೇಳೆ ಮಿಲಿಟರಿ ಪ್ರದರ್ಶನ, ಆಧುನಿಕ ಶಸ್ತ್ರಾಸ್ತ್ರ, ಡ್ರೋನ್, ಟ್ಯಾಂಕರ್ ಗಳು ಮತ್ತು ಕ್ಷಿಪಣಿ ಸೇರಿದಂತೆ ಇನ್ನಿತರ ರಚನೆಯನ್ನು ಪ್ರದರ್ಶಿಸಲಿದೆ. ಜೊತೆಗೆ ಭಾರತೀಯ ಸೇನೆಯ ವಿವಿಧ ರಚನೆಯ ವಿಮಾನಗಳು ಮತ್ತು ಹೆಲಿಕ್ಯಾಪ್ಟರ್ ಗಳು ಕೂಡ ಪಾಲ್ಗೊಳ್ಳಲಿದೆ. ಇನ್ನು ಭಾರತೀಯ ವಾಯುಪಡೆಯ ವಿಶೇಷ ನಿವೃತ್ತ ಸೈನಿಕರ ಟ್ಯಾಬ್ಲೋ ಕೂಡ ಇದರ ಭಾಗವಾಗಲಿದೆ.

ಈ ಬಾರಿಯ ಪಥಸಂಚಲನದಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಇಲಾಖೆಗಳಿಂದ ಒಟ್ಟು 30 ಸ್ತಬ್ಧ ಚಿತ್ರಗಳು ಭಾಗಿಯಾಗಲಿವೆ. ಈ ಮೂಲಕ ಭಾರತದ ಸಂಸ್ಕೃತಿ, ಪರಂಪರೆ, ನಾವಿನ್ಯತೆ ಮತ್ತು ಸ್ವಾವಲಂಬತೆಯನ್ನು ಪ್ರದರ್ಶಿಸಲಿದೆ. ಪಥಸಂಚಲನದಲ್ಲಿ ಸುಮಾರು 2500 ಕಲಾವಿದರು ಭಾಗಿಯಾಗಲಿದ್ದಾರೆ. ಇದೇ ವೇಳೆ ಕೆಂಪುಕೋಟೆಯಲ್ಲಿ ಭಾರತ ಪರ್ವ, ರಾಷ್ಟ್ರೀಯ ಶಾಲಾ ಬ್ಯಾಂಡ್ ಸ್ಪರ್ಧೆ, ಪ್ರಾಜೆಕ್ಟ್ ವೀರ್ ಗಾಥಾ 5.0 ಮತ್ತು ಪ್ರಧಾನಮಂತ್ರಿಯವರ ಎನ್‌ಸಿಸಿ ರ‍್ಯಾಲಿ ನಡೆಯಲಿದೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Spread the love ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ