Breaking News

ತೈಲ ಮಿತ ಬಳಕೆಗೆ ಮೋದಿ ಕರೆ – ಬೆಂಗಾವಲು ವಾಹನ ಕಡಿತಗೊಳಿಸಿದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

Spread the love

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿನ ಅಶಾಂತಿಯಿಂದಾಗಿ, ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಜೊತೆಗೆ, ತೈಲದ ಅಭಾವವೂ ಎದುರಾಗಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ  ಅವರು ಮಿತವ್ಯಯದ ಕರೆ ನೀಡಿದ್ದರು. ಪ್ರಧಾನಿಯವರ ಕರೆಗೆ ರಾಜ್ಯದ ನಾಯಕರು ಸ್ಪಂಧಿಸಿದ್ದಾರೆ.

ಕೊಡಗಿನ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ತಮ್ಮ ಬೆಂಗಾವಲು ವಾಹನಗಳನ್ನ ಕಡಿತ ಮಾಡಿದ್ದಾರೆ.

ಕೊಡಗು ಜಿಲ್ಲೆಯ ಪೊಲೀಸ್‌ ಇಲಾಖೆಯು ಕ್ಯಾಬಿನೆಟ್‌ ದರ್ಜೆಯ ಭದ್ರತೆ ಒದಗಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು ಸೃಷ್ಟಿಯಾಗುವ ಆತಂಕವಿದೆ. ಮತ್ತು ಪರಿಸರ ಮಾಲಿನ್ಯ ತಡೆಗಟ್ಟುವ ಸಂಬಂಧ ದೇಶದಲ್ಲಿ ನಿರ್ಮಾಣವಾಗಿರುವ ಆತಂಕದ ಪರಿಸ್ಥಿತಿ ನಿರ್ವಹಣೆ ಮಾಡುವ ಹಿನ್ನೆಲೆ ತಮ್ಮ ಬೆಂಗಾವಲು ವಾಹನ ಕಡಿತಗೊಳಿಸುವಂತೆ ಕೋರಿರುವುದಾಗಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸೌಥ್ ಕೊಂಕಣ ಎಜ್ಯುಕೇಷನ್ ಸೊಸೈಟಿಯಿಂದ ಪದ್ಮಶ್ರೀ ಪುರಸ್ಕೃತ ‘ಡಾ. ಪ್ರಭಾಕರ ಕೋರೆ’ ಅವರಿಗೆ ಸನ್ಮಾನ

Spread the loveಕೇವಲ ಸಾಂಪ್ರದಾಯಿಕ ಕ್ಲಾಸ್‌ರೂಮ್ ಬೋಧನೆಗೆ ಸೀಮಿತವಾಗದೆ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ; ಪದ್ಮಶ್ರೀ ಡಾ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ