Breaking News

ಮೋದಿ ಸರ್ಕಾರದಿಂದ ಕಠಿಣಾತಿಕಠಿಣ ಕಾನೂನು – ಪ್ರಶ್ನೆಪತ್ರಿಕೆ ಲೀಕಾಸುರರಿಗೆ 10 ವರ್ಷ ಜೈಲು, 10 ಕೋಟಿವರೆಗೆ ದಂಡ

Spread the love

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿಯುತ್ತಿರುವ ನಡುವೆಯೇ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ  ಕಠಿಣಾತಿಕಠಿಣ ಕಾನೂನು ತರಲು ಸಜ್ಜಾಗಿದೆ.

ಈ ಪ್ರಸ್ತಾವಿತ ಕಾನೂನಿನ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನ ಮೂರು ತಿಂಗಳೊಳಗೆ ಇತ್ಯರ್ಥಗೊಳಿಸುವ ವಿಶೇಷ ನ್ಯಾಯಾಂಗ ವ್ಯವಸ್ಥೆಯನ್ನು (ಫಾಸ್ಟ್‌ ಟ್ರ್ಯಾಕ್‌ ಕೋರ್ಟ್ ವ್ಯವಸ್ಥೆ – Fast Track Courts) ಜಾರಿಗೆ ತರುವ ಹಾಗೂ 10 ಕೋಟಿ ರೂ.ವರೆಗೆ ದಂಡ ವಿಧಿಸುವ ಉದ್ದೇಶವಿದೆ. ಇದರ ಮೂಲಕ ತ್ವರಿತ ನ್ಯಾಯ ಒದಗಿಸಿ, ದೇಶದ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನ ಮತ್ತಷ್ಟು ಬಲಪಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ತಿಳಿದುಬಂದಿದೆ.

3 ತಿಂಗಳಲ್ಲಿ ವಿಚಾರಣೆ ಪೂರ್ಣ
ಉನ್ನತ ಮೂಲಗಳ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ಗಳನ್ನ ಸ್ಥಾಪಿಸುವ ಪ್ರಸ್ತಾವವಿದೆ. ಈ ನ್ಯಾಯಾಲಯಗಳು ಪ್ರಕರಣ ದಾಖಲಾದ ದಿನದಿಂದ 3 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಬೇಕಾಗುತ್ತದೆ ಎಂಬ ನಿಯಮವನ್ನು ಕಾನೂನಿನಲ್ಲಿ ಸೇರಿಸುವ ಸಾಧ್ಯತೆಯಿದೆ.

10 ವರ್ಷ ಜೈಲು, 10 ಕೋಟಿ ವರೆಗೆ ದಂಡ
ಪ್ರಸ್ತಾವಿತ ಹೊಸ ಕಾನೂನಿನ ಅನ್ವಯ ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗುವವರ ವಿರುದ್ಧ ಅತ್ಯಂತ ಕಠಿಣ ಶಿಕ್ಷೆಯನ್ನೂ ಪ್ರಸ್ತಾಪಿಸಲಾಗಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಜೊತೆಗೆ 10 ಕೋಟಿ ರೂ. ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದು ಸಂಘಟಿತ ಪರೀಕ್ಷಾ ಅಕ್ರಮಗಳ ವಿರುದ್ಧದ ಅತ್ಯಂತ ಕಠಿಣ ಕಾನೂನುಗಳಲ್ಲಿ ಒಂದಾಗಲಿದೆ ಎನ್ನಲಾಗುತ್ತಿದೆ.

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೇಶದ ಹಲವು ಭಾಗಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದರ ಮಧ್ಯೆಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕ್ಯಾಬಿನೆಟ್‌ ಸಭೆ ನಡೆದಿದ್ದು, ಕಠಿಣಾತಿಕಠಿಣ ಕಾನೂನು ತರಲು ಸರ್ಕಾರ ಮುಂದಾಗಿದೆ.


Spread the love

About Laxminews 24x7

Check Also

ಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌

Spread the loveಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ  ಮಹಮದ್ ಅಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ