Breaking News

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Spread the love

ಚೆನ್ನೈ: ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ  ಬಿಜೆಪಿ (BJP) ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಎಐಡಿಎಂಕೆಯನ್ನು ಟೀಕಿಸುತ್ತಾ, ಪ್ರಧಾನಿ ನರೇಂದ್ರ ಮೋದಿ  ಅವರನ್ನು ಒಬ್ಬ ಭಯೋತ್ಪಾದಕ  ಎಂದು ಕರೆದಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅಲ್ಲದೇ ಖರ್ಗೆ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಯೂಟರ್ನ್‌ ಹೊಡೆದಿದ್ದಾರೆ.

ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನ ಬೆದರಿಸುತ್ತಾರೆ, ʻಭಯೋತ್ಪಾದಿಸುತ್ತಾರೆʼ ಆ ಅರ್ಥದಲ್ಲಿ ಹೇಳಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಎಐಡಿಎಂಕೆ ಪಕ್ಷವು  ಮೋದಿ ಅವರೊಂದಿಗೆ ಹೇಗೆ ಸೇರಬಹುದು? ಮೋದಿ ಒಬ್ಬ ಭಯೋತ್ಪಾದಕ, ಅವರು ಸಮಾನತೆಯನ್ನ ನಂಬುವುದಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದರು.

ತಮ್ಮ ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಒಬ್ಬ ಭಯೋತ್ಪಾದಕ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಾರೆ ಎಂದು ನಾನು ಹೇಳಲು ಬಯಸಿದ್ದೆ. ಪ್ರಧಾನಿ ಮೋದಿ ಯಾವಾಗಲೂ ಬೆದರಿಕೆ ಹಾಕುತ್ತಾರೆ ಮತ್ತು ಅವರ ನಡವಳಿಕೆ ರಾಜಕೀಯ ವಲಯದಲ್ಲಿ ಭಯ ಉಂಟುಮಾಡುತ್ತದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.

ತಮ್ಮ ಹೇಳಿಕೆಗಳು ಪ್ರಧಾನಿಯವರ ಕಾರ್ಯಶೈಲಿಯನ್ನ ಪ್ರಶ್ನಿಸುವ ಉದ್ದೇಶವನ್ನು ಹೊಂದಿವೆಯೇ ಹೊರತು ಅವರ ಮೇಲೆ ಯಾವುದೇ ವೈಯಕ್ತಿಕ ದಾಳಿ ಮಾಡುವ ಉದ್ದೇಶವನ್ನಲ್ಲ. ಕೇಂದ್ರ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಧಾನಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಮುಂದುವರಿದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದರು. ಜಾರಿ ನಿರ್ದೇಶನಾಲಯ , ಆದಾಯ ತೆರಿಗೆ ಇಲಾಖೆ ಮತ್ತು CBI ನಂತಹ ಪ್ರಮುಖ ಸಂಸ್ಥೆಗಳು ಸಂಪೂರ್ಣವಾಗಿ ಪ್ರಧಾನಿಯವರ ನಿಯಂತ್ರಣದಲ್ಲಿವೆ ಮತ್ತು ವಿರೋಧಿಗಳನ್ನ ಬೆದರಿಸಲು ಅವುಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಖರ್ಗೆ ಹೇಳಿಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಮೋದಿಯನ್ನು ಅವಮಾನಿಸುವುದು ಕಾಂಗ್ರೆಸ್‌ನ ಪಿತೂರಿ ಎಂದು ಸಂಬಿತ್ ಪಾತ್ರ ಹೇಳಿದ್ದಾರೆ. ಕಾಂಗ್ರೆಸ್‌ನ ಉದ್ದೇಶಪೂರ್ವಕ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವುದು ನಾಲಿಗೆಯ ಎಡವಟ್ಟಲ್ಲ, ಬದಲಾಗಿ ರಾಹುಲ್ ಗಾಂಧಿಯವರ ಆಜ್ಞೆಯ ಮೇರೆಗೆ ಮಾಡಿದ ಹೇಳಿಕೆ ಎಂದು ಪತ್ರಾ ಅರೊಪಿಸಿದರು.

ಒಸಾಮಾ ಬಿನ್ ಲಾಡೆನ್ ಅವರನ್ನು ಜಿ ಎಂದು ಸಂಬೋಧಿಸುವ ಮತ್ತು ಜಾಕಿರ್ ನಾಯಕ್ ಅವರಂತಹ ಜನರನ್ನು ಶಾಂತಿಯ ರಾಯಭಾರಿಗಳು ಎಂದು ಕರೆಯುವುದು ಇದೇ ಕಾಂಗ್ರೇಸ್ ಪಕ್ಷ ಎಂದು ಸಂಬೀತ ಪಾತ್ರ ಹೇಳಿದರು. ಕಾಂಗ್ರೆಸ್ ಪಕ್ಷವು ಪ್ರಧಾನಿಯನ್ನು ನಿಂದಿಸಿದಾಗಲೆಲ್ಲಾ ಭಾರತದ ಜನರು ಅದನ್ನು ಶಿಕ್ಷಿಸಿದ್ದಾರೆ ಎಂದು ಅವರು ಎಚ್ಚರಿಸಿದರು.


Spread the love

About Laxminews 24x7

Check Also

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Spread the loveನವದೆಹಲಿ: ದೆಹಲಿ-ಎನ್‌ಸಿಆರ್  ಪ್ರದೇಶದಲ್ಲಿ ಗುಂಡು ಹಾರಿಸುವುದು, ಗ್ರೆನೇಡ್ ದಾಳಿ ನಡೆಸುವುದು ಮತ್ತು ನಿರ್ದಿಷ್ಟ ವ್ಯಕ್ತಿಗಳ ಹತ್ಯೆಗೆ ಪಿತೂರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ