ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಏ.15ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು ಬರಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ.
ಏ.15 ರಂದು ಮೋದಿಯವರು ಬರುವ ಸಾಧ್ಯತೆ ಇದೆ. ಪ್ರಧಾನಿಗಳ ಆಗಮನದ ಅಧಿಕೃತ ಟಿಪಿ ಬರುವುದು ಮಾತ್ರ ಬಾಕಿ ಇದ್ದು, ಕಾರ್ಯಕ್ರಮಕ್ಕೆ ಚುಂಚನಗಿರಿ ಮಠ ಹಾಗೂ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
Laxmi News 24×7