Breaking News

ಆ.1 ರಂದು ಮೈಸೂರಿಗೆ ಮೋದಿ – 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ, ಸಾಂಸ್ಕೃತಿಕ ಯುವಕೇಂದ್ರ ಉದ್ಘಾಟನೆ

Spread the love

ಮೈಸೂರು: ಆಗಸ್ಟ್‌ 1 ರಂದು ಪ್ರಧಾನಿ ನರೇಂದ್ರ ಮೋದಿ  ಅವರು ಮೈಸೂರಿಗೆ ಭೇಟಿ ನೀಡಲಿದ್ದು, ಅಂದು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ಇಲ್ಲಿ ನೆಲೆಸಿದ್ದರು ಎನ್ನುವ ನೆನಪಿಗಾಗಿ ಸ್ಮಾರಕ  ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿದ್ದು, ಪ್ರಧಾನಿಗಳು ಉದ್ಘಾಟಿಸಲಿದ್ದಾರೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ.

ಸ್ಮಾರಕ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಅವರು ನಗರದಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಆಶ್ರಮದ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಸುಮಾರು 30 ನಿಮಿಷಗಳ ಕಾಲ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದಕ್ಕಾಗಿ ವಿಶೇಷ ಪಾಸ್‌ ಕೂಡ ಇರಲಿದೆ. ಪಾಸ್‌ ಇದ್ದವರಿಗಷ್ಟೇ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಇನ್ನೂ ಕಾರ್ಯಕ್ರಮದ ವೇಳೆ ಶ್ರೀರಾಮ ಮೂರ್ತಿ ನಿರ್ಮಿಸಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನ ಪ್ರಧಾನಿಗಳಿಗೆ ಸ್ಮರಣಿಕೆಯಾಗಿ ನೀಡಲಾಗುತ್ತದೆ. ಜೊತೆಗೆ

ವೇದಿಕೆಯಲ್ಲಿ ಪ್ರಧಾನಿ ಮೋದಿಯವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಉಪಸ್ಥಿತರಿರಲಿದ್ದಾರೆ. ಭದ್ರತಾ ಕಾರಣಗಳಿಂದ ವೇದಿಕೆಯಲ್ಲಿ ಕೆಲವೇ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ