Breaking News

ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

Spread the love

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಎಕ್‌್ಸಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ.

ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ಸಣ್ಣ ಕೈಗಾರಿಕೆಗಳು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರಿಗೆ ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ