Breaking News

ಮೋದಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೋರಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಉತ್ಸವ

Spread the love

ನವದೆಹಲಿ, ಫೆ.8-ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರದ ರಾಜಧಾನಿ ದೆಹಲಿ ಜನತೆಗೆ ಮನವಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೋರಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಉತ್ಸವ. ಈ ಜನತಂತ್ರ ಹಬ್ಬದಲ್ಲಿ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುವಂತೆ ಅವರು ಟ್ವೀಟರ್‍ನಲ್ಲಿ ಮನವಿ ಮಾಡಿದ್ದಾರೆ.

ದೇಶದ ಯಾವುದೇ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಸಂದರ್ಭಗಳಲ್ಲಿ ಮೋದಿ ಮತದಾರರಿಗೆ ಈ ರೀತಿಯ ಮನವಿ ಮಾಡುವುದು ಪರಿಪಾಠ. ಅಂತೆಯೇ ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಮತದಾರರಿಗೆ ಮನವಿ ಮಾಡಿ ಅಧಿಕ ಸಂಖ್ಯೆಯಲ್ಲಿ ತಮ್ಮ ಪವಿತ್ರ ಹಕ್ಕುಗಳನ್ನು ಚಲಾಯಿಸಬೇಕು. ಮತದಾನದಲ್ಲಿ ದಾಖಲೆ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಕೇಜ್ರಿವಾಲ್ ಮನವಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಸಹ ಟ್ವೀಟರ್‍ನಲ್ಲಿ ಮತದಾರರಿಗೆ ಅದರಲ್ಲೂ ಮಹಿಳೆಯರಿಗೆ ಮನವಿ ಮಾಡಿ ಅಧಿಕ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಕೋರಿದ್ದಾರೆ.


Spread the love

About Laxminews 24x7

Check Also

ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

Spread the love ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು “ಕರಿಯ’ ಎಂದು ಕರೆದಿದ್ದ ವಸತಿ ಸಚಿವ ಜಮೀರ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ