ಬೆಂಗಳೂರು,ಮಾ.24-ದೇಶದ ಜನತೆಯನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಎಲ್ಲರೂ ಇದಕ್ಕೆ ಸಹಕರಿಸುವಂತೆ ಪ್ರಧಾನಿಯವರು ಈಗಾಗಲೇ ಮನವಿ ಮಾಡಿದ್ದಾರೆ.
ಕೊರೊನಾ ತೀವ್ರತೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಇನ್ನಷ್ಟು ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಇಂದು ರಾತ್ರಿ ಎರಡನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕ್ರಿಯೆಗಿಂತ ನಿಷ್ಕ್ರಿಯೆಯೇ ಹೆಚ್ಚು ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ ನಾವೆಲ್ಲರೂ ದೇಶಕ್ಕಾಗಿ ಮಾತ್ರವಲ್ಲದೆ ತಮ್ಮ ತಮ್ಮ ಕುಟುಂಬಗಳನ್ನು ಸಂರಕ್ಷಿಸಿಕೊಳ್ಳಲು ಹೊರಗೆ ಹೋಗದಂತೆ ದಿಟ್ಟ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಿದ್ದಾರೆ.
ಮ್ಮ ಭಾಷಣದಲ್ಲಿ ಇನ್ನು ಹೆಚ್ಚಿನ ಕ್ರಮಗಳ ಬಗ್ಗೆ ಹಾಗೂ ಸೋಂಕು ಹರಡದಂತೆ ಇನ್ಯಾವ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ ಎಂಬ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.