Home / Uncategorized / ದಿನಗೂಲಿ ಕಾರ್ಮಿಕನ ಖಾತೆಗೆ ಜಮಾ ಆಯ್ತು ಬರೋಬ್ಬರಿ ₹9.99 ಕೋಟಿ; ಹೇಗೆ ಗೊತ್ತಾ?

ದಿನಗೂಲಿ ಕಾರ್ಮಿಕನ ಖಾತೆಗೆ ಜಮಾ ಆಯ್ತು ಬರೋಬ್ಬರಿ ₹9.99 ಕೋಟಿ; ಹೇಗೆ ಗೊತ್ತಾ?

Spread the love

ಪಾಟ್ನಾ: ಇತ್ತೀಚೆಗೆ ಬಿಹಾರದಲ್ಲಿ ಇಬ್ಬರು ಮಕ್ಕಳ ಖಾತೆಗೆ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಹಣ ಜಮಾ ಆಗಿತ್ತು. ಈ ಬೆನ್ನಲ್ಲೇ ರೈತನೋರ್ವನ ಖಾತೆಗೆ 50 ಕೋಟಿ ರೂಪಾಯಿ ಜಮೆಯಾದ ಬಳಿಕ ಈಗ ದಿನಗೂಲಿ ಕಾರ್ಮಿಕ ಬ್ಯಾಂಕ್​​ ಅಕೌಂಟ್​​ಗೆ 9.99 ಕೋಟಿ ರೂ. ಠೇವಣಿಯಾದ ಪ್ರಕರಣ ಬೆಳಕಿಗೆ ಬಂದಿದೆ.

ಹೌದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಖಾತೆ ತೆರೆಯಲು ಹೋದ ದಿನಗೂಲಿ ಕಾರ್ಮಿಕನ ಅಚ್ಚರಿ ಕಾದಿತ್ತು. ತನ್ನ ಖಾತೆಯಲ್ಲಿ 9.99 ಕೋಟಿ ರೂಪಾಯಿ ಜಮಾ ಆಗಿರುವುದಾಗಿ ಬ್ಯಾಂಕ್​​ ಮ್ಯಾನೇಜರ್​​ ಹೇಳಿದಾಗ ಈತ ಶಾಕ್​​ಗೆ ಈಡಾಗಿದ್ದಾರೆ.

ವಿಚಿತ್ರವೆಂದರೆ, ವಿಪಿನ್ ಚೌಹಾಣ್ ಎಂಬ ಕಾರ್ಮಿಕ ತಾನು ಯಾವುದೇ ಬ್ಯಾಂಕಿನಲ್ಲಿ ಖಾತೆ ತೆರೆದಿಲ್ಲ ಎಂದು ಹೇಳಿಕೊಂಡಿದ್ದಾನೆ. ಬಿಹಾರದ ಸುಪಾಲ್ ಪಟ್ಟಣದ ಸಿಸೌನಿ ಪ್ರದೇಶದ ಚೌಹಾಣ್​​ ಹೊಸ ಖಾತೆ ತೆರೆಯಲು ಹೋದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಖಾತೆ ತೆರೆಯಲು ಹೋದ ಈತನ ಹೆಸರಿನ ಆಧಾರ್ ಕಾರ್ಡ್​ ಮೂಲಕ ಬ್ಯಾಂಕ್​​ ಪರಿಶೀಲಿಸಿದ್ದಾರೆ. ಈ ವೇಳೆ ಇವರ ಹೆಸರಿನಲ್ಲಿ 10 ಕೋಟಿಯಷ್ಟು ಹಣ ಬಂದು ಜಮಾ ಆಗಿರುವುದಾಗಿ ಪತ್ತೆಯಾಗಿದೆ. ಇದರಿಂದ ಚೌಹಾಣ್ ದಿಗ್ಭ್ರಾಂತರಾಗಿದ್ದಾರೆ. ಅಲ್ಲದೇ ನಾನು ಖಾತೆಯೇ ತೆರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಯುವ ಮತದಾರರ ಚುನಾವಣೆ ಉತ್ಸಾಹ

Spread the loveಯುವ ಮತದಾರರ ಚುನಾವಣೆ ಉತ್ಸಾಹ ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೂ ಮಹತ್ವದ್ದಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ