Breaking News

ಮೊಬೈಲ್ ಬಳಸಬೇಡ ಎಂದು ತಾಯಿ ಬುದ್ಧಿವಾದ – ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಧಾರವಾಡ: ಹೆಚ್ಚು ಮೊಬೈಲ್  ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ.

ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೇಘಾ ಧಾರವಾಡದ ಖಾಸಗಿ ಕಾಲೇಜೊಂದರಲ್ಲಿ ಡಿ.ಇಡಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಹೆಚ್ಚು ಮೊಬೈಲ್ ಬಳಕೆ ಮಾಡುತ್ತಾಳೆ, ರೀಲ್ಸ್ ನೋಡುತ್ತಾಳೆ ಎಂದು ಆಕೆಯ ತಾಯಿ ಮೇಘಾಳಿಗೆ ಬೈದು ಬುದ್ಧಿವಾದ ಹೇಳಿದ್ದಳು. ಇಷ್ಟಕ್ಕೇ ಮೇಘಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿಷ ಸೇವಿಸಿದ್ದ ಮೇಘಾಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದಾಳೆ. ಈ ಸಂಬಂಧ ಗರಗ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ