Breaking News

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

Spread the love

ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.

ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ ಹಾಗೂ ಆಕೆಯ ಹೊಟ್ಟೆಯಲಿದ್ದ ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ. ಹೀಗಾಗಿ ಬಾಣಂತಿ ಹಾಗೂ ಮಗುವಿನ ಸಾವಿಗೆ ನ್ಯಾಯ ಕೊಡಿ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

ಬಿಮ್ಸ್ ಆಸ್ಪತ್ರೆಗೆ ಎಪಿಸಿಎಂಸಿ ಸಿಪಿಐ ಉಸ್ಮಾನ ಆವಟಿ, ಪಿಎಸ್‌ಐ ಸರ್ದಾರ್ ಮುತ್ತತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಇಬ್ಬರು ಅಪರಾಧಿಗಳಿಗೆ ಪೋಕ್ಸೊ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

Spread the loveಬೆಳಗಾವಿ : ಬಾಲಕಿ ಮೇಲೆ ಅಪರಾಧ ಶಿಕ್ಷೆ ಅತ್ಯಾಚಾರ ಎಸಗಿದ್ದ ಅಪರಾಧಿ ಖಾನಾಪುರ ತಾಲೂಕಿನ ನಂದಗಡ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ