Breaking News

ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ತಾಯಿ: ಬಳಿಕ ತಾನೂ ಆತ್ಮಹತ್ಯೆ

Spread the love

ತಾಯಿಯೊಬ್ಬರು 14 ವರ್ಷದ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಮಗಳ ಅನಾರೋಗ್ಯಕ್ಕೆ ಬೇಸತ್ತು ಹೆತ್ತ ತಾಯಿಯೇ ಮಗಳನ್ನು ಕೊಲೆಗೈದಿದ್ದಾರೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸುದ್ದಿ ಕೇಳಿ ಇಡೀ ಕರಾವಳಿ ಜಿಲ್ಲೆ ಬೆಚ್ಚಿಬಿದ್ದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರಗ ಕಾಲೋನಿಯಲ್ಲಿ ಹೆತ್ತ ತಾಯಿಯೇ ಮಗಳ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. 14 ವರ್ಷದ ಸುಪ್ರತಿ ತಾಯಿಯಿಂದ ಕೊಲೆಯಾದ ಮಗಳು. ನೇತ್ರಾವತಿ ಹೆತ್ತ ಮಗಳನ್ನೇ ಕೊಂದ ತಾಯಿ.

ನೇತ್ರಾವತಿ ಹಾಗೂ ಸುಧಾಕರ್ ದಂಪತಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಗೆ ಸುಪ್ರತಿ ಎಂಬ ಮಗಳು ಹಾಗೂ ಇನ್ನೋರ್ವ ಒಂದು ವರ್ಷದ ಗಂಡು ಮಗ. ಇಬ್ಬರು ಮಕ್ಕಳು. ಸುಪ್ರತಿ ಹುಟ್ಟಿದಾಗಿನಿಂದ ದಿವ್ಯಾಂಗಳಾಗಿದ್ದಳು. ತಾಯಿಯೇ ಆಕೆಯ ಆರೈಕೆ ಮಾಡುತ್ತಿದ್ದರು. .ಸದಾಕಾಲ ಆಕೆಯ ಆರೈಕೆಯಲ್ಲಿಯೇ ಇರಬೇಕಾದ ಸ್ಥಿತಿ. ಇದೇ ಕಾರಣಕ್ಕೆ ಮಗಳನ್ನು ಕೊಲೆ ಮಾಡಿರಬಹುದು ಎನ್ನಲಾಗಿದೆ.

ಕತ್ತಿಯಿಂದ ಮಗಳ ಕತ್ತು ಕೊಯ್ದು ಬಳಿಕ ಮಗಳ ಶವದ ಮುಂದೆಯೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸುಧಾಕರ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ