Breaking News

ಮೂವರು ಅಪ್ರಾಪ್ತ ಮಕ್ಕಳಿಗೆ ವಿಷವಿಕ್ಕಿ ಮತ್ತು ಕತ್ತು ಹಿಸುಕಿ ಕೊಲೆ: ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

Spread the love

ಚಂಡೀಗಢ: ಮಹಿಳೆಯೊಬ್ಬರು ತನ್ನ ಮೂವರು ಅಪ್ರಾಪ್ತ ಮಕ್ಕಳಿಗೆ ವಿಷವಿಕ್ಕಿ ಮತ್ತು ಕತ್ತು ಹಿಸುಕಿ ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ ಎಂದು ಶುಕ್ರವಾರ(ಜು. 03) ವರದಿಯಾಗಿದೆ.
ಗುರುವಾರ ಸಂಜೆ ಸಮಯದಲ್ಲಿ ಮಾನ್ಸಾದಲ್ಲಿ ಈ ಘಟನೆ ನಡೆದಿದೆ. ಬಾಡಿಗೆ ಮನೆಯ ನಿವಾಸಿಯಾಗಿದ್ದ 36 ವರ್ಷದ ಸಂದೀಪ್ ಕೌರ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅದಕ್ಕೂ ಮೊದಲು ತಮ್ಮ 12 ವರ್ಷದ ಹಿರಿಯ ಮಗಳು ಖುಷ್‌ಪ್ರೀತ್‌ಗೆ ವಿಷವಿಕ್ಕಿ ಬಳಿಕ ಎರಡನೇ ಮತ್ತು ಮೂರನೇ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ಮನೆಗೆ ಬಂದ ಸಂಬಂಧಿಕರೊಬ್ಬರು ನೋಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಬಳಿಕ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಮೃತ ಕೌರ್ ತಮ್ಮ ಮೊದಲ ಪತಿ ನಿಧನರಾದ ಬಳಿಕ ಎರಡನೇ ಮದುವೆಯಾಗಿದ್ದರು ಎಂದು ತಿಳಿಸಿದ್ದಾರೆ. ಮೊದಲ ಪತಿಯಿಂದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಮರಣೋತ್ತರ ಪರೀಕ್ಷೆಯ ವರದಿಯ ನಂತರ ತಿಳಿಯಲಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ

Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ