ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, “ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಎಳ್ಳು, ಬೆಲ್ಲ ಸವಿಯುತ್ತಾ ನಮ್ಮ ರಾಬರ್ಟ್ ಚಿತ್ರದ ಎರಡನೇ ಲುಕ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ” ಎಂದು ಬರೆದುಕೊಂಡಿದ್ದಾರೆ.
ರಿಲೀಸ್ ಆಗಿರುವ ಮೋಷನ್ ಪೋಸ್ಟರ್ 53 ಸೆಕೆಂಡ್‍ಗಳಿದ್ದು, ಅದ್ಭುತವಾಗಿ ಮೂಡಿ ಬಂದಿದೆ. ದರ್ಶನ್ ಆಂಜನೇಯ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಹೆಗಲ ಮೇಲೆ ರಾಮನ ಪಾತ್ರದ ಮಗುವನ್ನು ಕೂರಿಸಿಕೊಂಡಿದ್ದಾರೆ. ಪುಟ್ಟ ರಾಮ, ರಾವಣ ನ ಪ್ರತಿಕೃತಿಯನ್ನು ದಹಿಸಲು ಬಿಲ್ಲು ಹಿಡಿದಿರುವುದನ್ನು ಕಾಣಬಹುದಾಗಿದೆ.
ಕುರುಕ್ಷೇತ್ರದಲ್ಲಿ ದುರ್ಯೋಧನನಾಗಿ ನೋಡಿದ್ದ ಅಭಿಮಾನಿಗಳು ‘ರಾಬರ್ಟ್’ ಸಿನಿಮಾದಲ್ಲಿ ಆಂಜನೇಯನ ಅವತಾರದಲ್ಲಿ ದರ್ಶನ್ ನೋಡಿ ಖುಷಿಯಾಗಿದ್ದಾರೆ.

Laxmi News 24×7